12:39 PM Saturday 18 - October 2025

ಮತ್ತೆ ಭಾರತದ ಗಡಿ ಅತಿಕ್ರಮಿಸಿದ ಚೀನಾ; ಸತ್ಯ ಒಪ್ಪಿಕೊಂಡ ಕೇಂದ್ರ ಸರ್ಕಾರ

22/03/2025

ಚೀನಾ ಭಾರತದ ಗಡಿ ಅತಿಕ್ರಮಿಸುವುದು ಮುಂದುವರಿದಿದೆ. ಇದನ್ನು ಮೊದಲ ಬಾರಿ ಕೇಂದ್ರ ಸರಕಾರ ಒಪ್ಪಿಕೊಂಡಿದೆ. ಚೀನಾ ಎರಡು ನೂತನ ಪ್ರಾಂತ್ಯಗಳ ಘೋಷಣೆ ಮಾಡಿದ್ದು, ಇದರಲ್ಲಿ ಇದರಲ್ಲಿ ಲಡಾಖ್‌ ಕೆಲವು ಭಾಗಗಳು ಸೇರಿವೆ, ಈ ಅತಿಕ್ರಮಣವನ್ನು ಒಪ್ಪಲು ಸಾಧ್ಯವಿಲ್ಲ. ಇದರ ಬಗ್ಗೆ ರಾಜತಾಂತ್ರಿಕತೆ ಮೂಲಕ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ಕೀರ್ತಿ ವರ್ಧನ್‌ ಸಿಂಗ್‌ ಲೋಕಸಭೆಯಲ್ಲಿ ಕೇಳಿದ್ದ ಲಿಖಿತ ಪ್ರಶ್ನೆಗೆ, ಉತ್ತರ ನೀಡಿದ್ದು, ಭಾರತದ ಭೂ ಪ್ರದೇಶದಲ್ಲಿ ಚೀನಾದ ಅತಿಕ್ರಮಣವನ್ನು ಭಾರತ ಯಾವತ್ತೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಭಾರತದ ಭೂಭಾಗವನ್ನು ಚೀನಾ ಅತಿಕ್ರಮಣ ಮಾಡುವುದನ್ನು ಎಂದಿಗೂ ಸಹಿಸುವುದಿಲ್ಲ. ಚೀನಾದ ಎರಡು ನೂತನ ಕೌಂಟಿಗಳ ನಿರ್ಮಾಣ ಭಾರತದ ಸಾರ್ವಭೌಮತ್ವದ ಅಚಲವಾದ ನಿಲುವಿಗೆ ಬದ್ಧವಾಗಿದ್ದು, ಬಲವಂತದ ಅತಿಕ್ರಮಣಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ ಎಂದು ಸಿಂಗ್‌ ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version