6:11 PM Saturday 13 - September 2025

ಚಿಟ್‌ ಫಂಡ್ ವ್ಯವಹಾರ: ವ್ಯಕ್ತಿಗೆ 10 ಲಕ್ಷ ರೂಪಾಯಿ ಪಂಗನಾಮ | ದೂರು ದಾಖಲು

fraud
27/09/2022

ಚಿಟ್‌ ಫಂಡ್ ವ್ಯವಹಾರದಲ್ಲಿ ವಂಚನೆ ಮಾಡಿರುವ ಘಟನೆ ಸುರತ್ಕಲ್ ಸಮೀಪದ ಇಡ್ಯಾ ಗ್ರಾಮದಲ್ಲಿ  ಬೆಳಕಿಗೆ ಬಂದಿದೆ.

ಫೈನಾನ್ಸ್ ಮೂಲಕ ಚಿಟ್‌ ಫಂಡ್ ವ್ಯವಹಾರ ನಡೆಸುತ್ತಿದ್ದ ಅಶೋಕ್ ಭಟ್, ವಿದ್ಯಾ ಹಾಗೂ ಪ್ರಿಯಾಂಕ ಭಟ್ ಎಂಬವರು ತನಗೆ 10 ಲಕ್ಷ ರೂಪಾಯಿಯನ್ನು ನೀಡದೇ ವಂಚಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಆರೋಪಿಗಳ ಫೈನಾನ್ಸ್‌ ನಲ್ಲಿ ನಾನು 10 ಲಕ್ಷ ರೂಪಾಯಿ ಮೌಲ್ಯದ ಚಿಟ್‌ ಫಂಡ್‌ ಗೆ ಸೇರಿದ್ದು, 2019ರ ಸೆಪ್ಟೆಂಬರ್‌ ನಿಂದ ಪ್ರತೀ ತಿಂಗಳು 50 ಸಾವಿರ ರೂಪಾಯಿ ಚಿಟ್‌ ಫಂಡ್‌ ಗೆ ಪಾವತಿಸಲು ತಿಳಿಸಿದ್ದರು.

ಅದಕ್ಕೆ ಒಪ್ಪಿದ ಬಳಿಕ ಆರೋಪಿತರು ಪ್ರತಿದಿನ 1,500 ರೂಪಾಯಿಯನ್ನು ನನ್ನಿಂದ ಪಡೆದುಕೊಂಡು ಹೋಗುತ್ತಿದ್ದರು. ತಿಂಗಳಿಗೊಮ್ಮೆ ಕಚೇರಿಗೆ ಹೋಗಿ ವ್ಯಹಾರದ ಪಾಸ್ ಪುಸ್ತಕದಲ್ಲಿ ಹಣ ಕಟ್ಟಿರುವ ಬಗ್ಗೆ ನಮೂದಿಸಿ ಸಹಿ ಪಡೆದುಕೊಂಡು ಬರುತ್ತಿದ್ದೆ.

2021ರ ಮಾರ್ಚ್ 28ರಂದು ಫಂಡ್ ಮುಕ್ತಾಯವಾಗಿದ್ದು, ನಂತರದ ದಿನಗಳಲ್ಲಿ ಹಣ ಪಾವತಿಸುವುದಾಗಿ ಫೈನಾನ್ಸ್ ಮಾಲಕರು ತಿಳಿಸಿದ್ದರು. ಆದರೆ  ಒಂದಲ್ಲಾ ಒಂದು ಕಾರಣ ನೀಡಿ ಹಣ ಕೊಡದೆ ತಪ್ಪಿಸಿಕೊಂಡಿದ್ದಾರೆ. ನನಗೆ ಮಾತ್ರವಲ್ಲದೆ ಇತರರಿಗೂ ಸಹಿತ ಸುಮಾರು 2 ಕೋಟಿ ರೂಪಾಯಿನಷ್ಟು ಹಣ ನೀಡದೆ ವಂಚಿಸಿದ್ದಾರೆ ಎಂದು ಅವರು ಪೊಲೀಸ್ ದೂರಿನಲ್ಲಿ ವಿವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version