9:30 AM Thursday 16 - October 2025

ಬಿಗ್ ಬ್ರೇಕಿಂಗ್ ನ್ಯೂಸ್: ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕೊಟ್ಟೂರು ಆತ್ಮಹತ್ಯೆಗೆ ಯತ್ನ

chithra kottur
08/04/2021

ಕೋಲಾರ: ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕೊಟ್ಟೂರು ತಮ್ಮ ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಮದುವೆ ವಿಚಾರವಾಗಿ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಅವರು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಮಾರ್ಚ್ 28 ರಂದು ಮಂಡ್ಯ ಮೂಲದ ನಾಗರ್ಜುನ್ ಜೊತೆಗೆ ಮದುವೆಯಾಗಿದ್ದರು. ಆದರೆ ನಾಗರ್ಜುನ್ ಗೆ ಈ ಮದುವೆ ಇಷ್ಟವಿರಲಿಲ್ಲ ಎಂದು ಹೇಳಿದ್ದು, ಮದುವೆಯ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

ನಾಗರ್ಜುನ್ ಗೆ ಚೈತ್ರಾ ಜೊತೆ ಮದುವೆಯಾಗಲು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ಮದುವೆಯಾಗಿ ಮಾಡಿಸಲಾಗಿತ್ತು ಎಂದು ನಾಗರ್ಜುನ್ ಮನೆಯವರು ಆರೋಪಿಸಿದ್ದರು. ಆದರೆ ಚೈತ್ರಾ ತನಗೆ ನಾಗರ್ಜುನ್ ಬೇಕು ಎಂದು ಪಟ್ಟು ಹಿಡಿದಿದ್ದರು.

ಇತ್ತೀಚಿನ ಸುದ್ದಿ

Exit mobile version