ಚಿತ್ತಾಪುರ: ಬಿಗಿ ಪೊಲೀಸ್ ಭದ್ರತೆಯ ನಡುವೆ ‘ಸಂಘದ ಬಲ’ ಪ್ರದರ್ಶನ
ಚಿತ್ತಾಪುರ: ಕಳೆದೊಂದು ಒಂದು ತಿಂಗಳಿನ ಸತತ ಪ್ರಯತ್ನಗಳ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನವು ಭಾನುವಾರ ಪೊಲೀಸ್ ಬಿಗಿ ಭದ್ರತೆಯ ನಡುವೆ ನಡೆಯಿತು.
ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರ ಪಟ್ಟಣದಲ್ಲಿ ಆರ್ ಎಸ್ ಎಸ್ ಗಣವೇಷಧಾರಿಗಳು ಪೊಲೀಸರ ಸರ್ಪಗಾವಲಿನ ನಡುವೆ ತನ್ನ ‘ಸಂಘದ ಬಲ’ ಪ್ರದರ್ಶಿಸಿದರು.
ಪಥಸಂಚಲನಕ್ಕೆ ಜಿಲ್ಲಾಡಳಿತ ನೀಡಿದ್ದ ಷರತ್ತುಬದ್ಧ ಅನುಮತಿಯಂತೆ 300 ಗಣವೇಷಧಾರಿಗಳು ಹಾಗೂ 50 ಘೋಷ್ ವಾದಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ನಿಗದಿತ ಪಟ್ಟಿದ್ದವರನ್ನು ಬಿಟ್ಟು ಗಣವೇಷ ಧರಿಸಿ ಬಂದಿದ್ದ ಇತರರನ್ನು ಪಥಸಂಚಲನದಲ್ಲಿ ಪಾಲ್ಗೊಳ್ಳದಂತೆ ಪೊಲೀಸರು ತಡೆದರು. ಮಾತ್ರವಲ್ಲ ಘೋಷಣೆ ಮೊಳಗಿಸುತ್ತಿದ್ದ ಯುವಕರನ್ನು ಪೊಲೀಸರು ತಡೆದು ಪಥಸಂಚಲನದ ಹಿಂದೆ ಬರುವಂತೆ ನೋಡಿಕೊಂಡರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























