10:24 AM Thursday 4 - September 2025

ಶಾಲೆಗಳಿಂದ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟ್ ನಿಷೇಧ, ದಂಡದ ಪ್ರಮಾಣ ಏರಿಕೆ ಮಸೂದೆ ಪಾಸ್

baned
21/02/2024

ಬೆಂಗಳೂರು: ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯ (ಕರ್ನಾಟಕ ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿಂದು ಅಂಗೀಕಾರವಾಗಿದೆ.

ಈ ಮಸೂದೆಯನ್ವಯ ಶಾಲೆಗಳಿಂದ ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡದ ಪ್ರಮಾಣ 100 ರೂ. ರಿಂದ 1000 ರೂ. ಗೆ ಏರಿಕೆ ಮಾಡಲಾಗಿದೆ.

ಇನ್ನು ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಬಾರ್ ರೆಸ್ಟೋರೆಂಟ್ ಹಾಗೂ ಇತರೆ ಕಡೆಗಳಲ್ಲಿ ಹುಕ್ಕಾ ಬಾರ್ ನಿಷೇಧಿಸಲಾಗಿದೆ. ಹುಕ್ಕಾ ಬಾರ್ ಅನಧಿಕೃತವಾಗಿ ನಡೆಸಿದರೆ ಒಂದು ವರ್ಷಕ್ಕೆ ಕಡಿಮೆ ಇಲ್ಲದಂತೆ ಹಾಗೂ 3 ವರ್ಷಕ್ಕೆ ವಿಸ್ತರಣೆ ಮಾಡುವ ಜೈಲು ಶಿಕ್ಷೆ ಮತ್ತು 50 ಸಾವಿರದಿಂದ 1 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ.

ಇತ್ತೀಚಿನ ಸುದ್ದಿ

Exit mobile version