ಕ್ಷಮೆಯಾಚಿಸಲ್ಲ, ಪಶ್ಚಾತಾಪವಿಲ್ಲ: ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನಿಂದ ಹೇಳಿಕೆ

rakesh kishore
07/10/2025

ನವದೆಹಲಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಜೇಶ್ ಕಿಶೋರ್, ತಾನು ಮಾಡಿರುವ ಕೃತ್ಯಕ್ಕೆ ಯಾವುದೇ ಪಶ್ಚಾತಾಪ ಇಲ್ಲ, ನನ್ನ ನಿರ್ಧಾರ ಸರಿ ಎಂದು ಹೇಳಿದ್ದಾರೆ.

ಮಾಧ್ಯಮಗಳಿಗೆ ಈ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸುವುದಿಲ್ಲ, ಜೈಲು ಶಿಕ್ಷೆ ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ. ಅಲ್ಲದೇ ನನಗೆ ಶೂ ಎಸೆಯಲು ದೇವರೇ ಪ್ರೇರಣೆ ನೀಡಿದ್ದಾನೆ ಎಂದಿದ್ದಾರೆ.

ಖಜುರಾಹೊ ಅರ್ಜಿ ವಿಚಾರಣೆ ವೇಳೆ ನ್ಯಾ. ಗವಾಯಿ ಹೇಳಿದ ಅಭಿಪ್ರಾಯದಿಂದ ನನಗೆ ರಾತ್ರಿ ನಿದ್ದೆಯೇ ಬರಲಿಲ್ಲ. ನಂತರ ಮಾರಿಷಸ್‌ನಲ್ಲಿ ಭಾರತೀಯ ಕಾನೂನು ವ್ಯವಸ್ಥೆಯು ಕಾನೂನಿನ ಆಳ್ವಿಕೆಯಿಂದ ನಿಯಂತ್ರಿಸಲ್ಪಡುತ್ತದೆಯೇ ಹೊರತು ಬುಲ್ಡೋಜರ್ ನಿಯಮದಿಂದ ಅಲ್ಲ ಎಂದು ಗವಾಯಿ ಹೇಳಿಕೆಯಿಂದ ನನಗೆ ಅಸಮಾಧಾನವಾಗಿತ್ತು ಎಂದು ಹೇಳಿದರು.

ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ವೈದ್ಯಕೀಯ ಕೀಟಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದಿದ್ದೇನೆ ಎಂದು ಹೇಳಿಕೊಂಡಿರುವ ಕಿಶೋರ್, ವಕೀಲ ವೃತ್ತಿ ಮಾಡುವ ಮೊದಲು ವಿಶ್ವ ಆರೋಗ್ಯ ಸಂಸ್ಥೆಗೆ ಸಲಹೆ ನೀಡಿದ್ದೇನೆ. ಮಾನಸಿಕವಾಗಿಯೂ ನಾನು ಸ್ಥಿಮಿತದಲ್ಲಿದ್ದೇನೆ ಎಂದಿದ್ದಾರೆ.

ನನ್ನ ಕೃತ್ಯದಿಂದ ಕುಟುಂಬದವರು ಅಸಮಾಧಾನಗೊಂಡಿದ್ದಾರೆ ಎನ್ನುವುದು ನನಗೆ ತಿಳಿದಿದೆ.  ಮುಂದೆ ಯಾವುದೇ ರೀತಿಯ ಪರಿಣಾಮ ಎದುರಿಸಲು ನಾನು ಸಿದ್ಧನಿದ್ದೇನೆ. ದೇವರ ಹೆಸರಿನಲ್ಲೇ ಎಲ್ಲವನ್ನೂ ಸಹಿಸುತ್ತೇನೆ ಎಂದು ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version