ಮಸೀದಿ ಸಮೀಕ್ಷೆ ವಿಚಾರ: ಸಂಭಾಲ್ ನಲ್ಲಿ ಘರ್ಷಣೆ, ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ
ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭಾನುವಾರ ಮಸೀದಿಯ ಅಧಿಕೃತ ಸಮೀಕ್ಷೆಯನ್ನು ಗುಂಪೊಂದು ವಿರೋಧಿಸಿದಾಗ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದಿದೆ.
ಸರ್ವೇ ತಂಡ ಆಗಮಿಸುತ್ತಿದ್ದಂತೆ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿಯ ಬಳಿ ಜಮಾಯಿಸಿ ಇದಕ್ಕೆ ವಿರೋಧ ವ್ಯಕ್ತಪಡಿಸಿದರು.
ಜನಸಮೂಹವು ಸಮೀಕ್ಷೆ ತಂಡದ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಪರಿಸ್ಥಿತಿ ಹಿಂಸೆಗೆ ತಿರುಗಿತು. ಸ್ಥಳದಲ್ಲಿ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿತ್ತು. ಇದಕ್ಕೆ ಪ್ರತೀಕಾರವಾಗಿ ಜನಸಮೂಹವನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಗಳನ್ನು ಪ್ರಯೋಗಿಸಿದರು.
ಮಸೀದಿ ಮೂಲತಃ ದೇವಾಲಯವಾಗಿತ್ತು ಎಂದು ನ್ಯಾಯಾಲಯದ ದೂರಿನ ನಂತರ ಶಾಹಿ ಜಾಮಾ ಮಸೀದಿಯಲ್ಲಿ ಸಮೀಕ್ಷೆಯನ್ನು ನಿಗದಿಪಡಿಸಲಾಗಿತ್ತು. ನವೆಂಬರ್ 19 ರಂದು ಇದೇ ರೀತಿಯ ಸಮೀಕ್ಷೆಯನ್ನು ನಡೆಸಲಾಗಿದ್ದು, ಸ್ಥಳೀಯ ಪೊಲೀಸರು ಮತ್ತು ಮಸೀದಿಯ ನಿರ್ವಹಣಾ ಸಮಿತಿಯ ಸದಸ್ಯರು ಹಾಜರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj