ವಸತಿ ಶಾಲೆಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿ ನೇಣಿಗೆ ಶರಣು

29/06/2025
ಚಿಕ್ಕಮಗಳೂರು: ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಕೊಪ್ಪ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.
ಶಮಿತಾ (15) ನೇಣಿಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ. ಕಳೆದ ರಾತ್ರಿ ಬಾಲಕಿ ನೇಣಿಗೆ ಶರಣಾಗಿದ್ದಾಳೆ ಬೆಳಗ್ಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.
ಶಮಿತಾ ಮೊರಾರ್ಜಿ ವಸತಿ ಶಾಲೆಯಲ್ಲೇ 6ನೇ ತರಗತಿಯಲ್ಲಿ ಓದುತ್ತಿದ್ದಳು. ಬಾಲಕಿಯ ಸಾವಿಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.
ಘಟನೆ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD