ಉತ್ತರ ಪತ್ರಿಕೆ ನಕಲಿ ಮಾಡಲು ಬಿಡದ SSLC ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ಸಹಪಾಠಿಗಳು!

ಥಾಣೆ: SSLC ಪರೀಕ್ಷೆಯ ಸಮಯದಲ್ಲಿ ಉತ್ತರ ಪತ್ರಿಕೆ ನಕಲಿ ಮಾಡಲು ಬಿಡದ ಸಹಪಾಠಿಗೆ ಮೂವರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭೀವಂಡಿ ಪಟ್ಟಣದಲ್ಲಿ ನಡೆದಿದೆ.
10 ನೇ ತರಗತಿ ಲಿಖಿತ ಪರೀಕ್ಷೆಯ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಸಂತ್ರಸ್ತ ಪರೀಕ್ಷೆ ಸಮಯದಲ್ಲಿ ತನ್ನ ಸಹಪಾಠಿಗಳಿಗೆ ಉತ್ತರ ಪತ್ರಿಕೆಯನ್ನು ತೋರಿಸಲು ನಿರಾಕರಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡ ಮೂವರು ಸಹಪಾಠಿಗಳು, ಪರೀಕ್ಷಾ ಹಾಲ್ ನಿಂದ ಹೊರಬಂದ ತಕ್ಷಣ ಆತನಿಗೆ ಥಳಿಸಿ ಬಳಿಕ ಚೂರಿಯಿಂದ ಚುಚ್ಚಿದ್ದಾರೆ ಎನ್ನಲಾಗಿದೆ.
ಗಾಯಗೊಂಡ ಸಂತ್ರಸ್ತ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಡಿಸ್ಚಾರ್ಜ್ ಆಗಿದ್ದಾನೆ. ಕೃತ್ಯವೆಸಗಿದ ಮೂವರು ವಿದ್ಯಾರ್ಥಿಗಳ ವಿರುದ್ಧ ಭೀವಂಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಐಪಿಸಿ ಸೆಕ್ಷನ್ 324 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth