ಹಸಿರು ಫೌಂಡೇಶನ್ ಹಾಗೂ ಪರಿಸರ ಪ್ರೇಮಿಗಳಿಂದ  ಸ್ವಚ್ಛತಾ ಅಭಿಯಾನ - Mahanayaka

ಹಸಿರು ಫೌಂಡೇಶನ್ ಹಾಗೂ ಪರಿಸರ ಪ್ರೇಮಿಗಳಿಂದ  ಸ್ವಚ್ಛತಾ ಅಭಿಯಾನ

hasiru foundation
02/03/2025

ಕೊಟ್ಟಿಗೆಹಾರ: ಹಸಿರು ಫೌಂಡೇಶನ್ (ರಿ) ವತಿಯಿಂದ ಮಾರ್ಚ್ 3, 2025 ಸೋಮವಾರ ಬೆಳಗ್ಗೆ 10.30ಕ್ಕೆ ಬಣಕಲ್ ಪೊಲೀಸ್ ಠಾಣೆ ಸರ್ಕಲ್ ನಿಂದ ಚಾರ್ಮಾಡಿ ವರೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


Provided by

ಈ ಮಹತ್ವಾಕಾಂಕ್ಷಿ ಪರಿಸರ ಅಭಿಯಾನದಲ್ಲಿ 250ಕ್ಕೂ ಹೆಚ್ಚು ಸ್ವಯಂ ಸೇವಕರು ಭಾಗವಹಿಸಲಿದ್ದು, ಬಣಕಲ್ ಭಾಗದ ಸಾರ್ವಜನಿಕರು ಹಾಗೂ ಎಲ್ಲಾ ಪರಿಸರ ಪ್ರೇಮಿಗಳು ಈ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಫೌಂಡೇಶನ್ ಅಧ್ಯಕ್ಷ ರತನ್ ಊರುಬಗೆ ಮನವಿ ಮಾಡಿದ್ದಾರೆ.

ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುವ ಸ್ವಯಂ ಸೇವಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ, ಅವರ ಆರೋಗ್ಯದ ಹಿತದೃಷ್ಟಿಯಿಂದ ಹ್ಯಾಂಡ್‌ಗ್ಲೌಸ್, ಮಾಸ್ಕ್ ವಿತರಣೆ ಹಾಗೂ ತುರ್ತು ವೈದ್ಯಕೀಯ ಸೇವೆಗಾಗಿ ತುರ್ತು ಚಿಕಿತ್ಸಾ ವಾಹನವನ್ನು ನಿಯೋಜಿಸಲಾಗಿದೆ.


Provided by

ಪರಿಸರ ಸಂರಕ್ಷಣೆಗೆ ಇಂತಹ ಕಾರ್ಯಕ್ರಮಗಳು ಮಹತ್ವವನ್ನು ಹೊಂದಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಹಸಿರು ಫೌಂಡೇಶನ್ ತಂಡ ಕರೆ ನೀಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ