ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಮೇ 15ರವರೆಗೆ ಸ್ಥಗಿತ! - Mahanayaka
12:41 AM Thursday 23 - October 2025

ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಮೇ 15ರವರೆಗೆ ಸ್ಥಗಿತ!

airports
09/05/2025

ನವದೆಹಲಿ: ಪಾಕಿಸ್ತಾನದ ಜೊತೆಗೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯವು ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ಮೇ 15ರವರೆಗೆ ಸ್ಥಗಿತಗೊಳಿಸಿದೆ.

ಪಂಜಾಬ್‌ ನ ಅಮೃತಸರ, ಲುಧಿಯಾನ, ಪಟಿಯಾಲ, ಬಟಿಂಡಾ, ಹಲ್ವಾರಾ ಮತ್ತು ಪಠಾಣ್‌ ಕೋಟ್, ಹಿಮಾಚಲ ಪ್ರದೇಶದ ಭುಂತರ್, ಶಿಮ್ಲಾ ಮತ್ತು ಕಾಂಗ್ರಾ–ಗಗ್ಗಲ್, ಕೇಂದ್ರಾಡಳಿತ ಪ್ರದೇಶದ ಚಂಡೀಗಢ, ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮತ್ತು ಜಮ್ಮು, ಲಡಾಖ್‌ ನ ಲೇಹ್, ರಾಜಸ್ಥಾನದ ಕಿಶೆಂಗಢ, ಜೈಸಲ್ಮೇರ್, ಜೋಧ್‌ ಪುರ ಮತ್ತು ಬಿಕಾನೇರ್ ಮತ್ತು ಗುಜರಾತ್‌ ನ ಮುಂದ್ರಾ, ಜಾಮ್‌ನಗರ, ಹಿರಾಸರ್, ಪೋರ್ಬಂದರ್, ಕೇಶೋಡ್, ಕಾಂಡ್ಲಾ ಮತ್ತು ಭುಜ್ ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಮೇ 15ರವರೆಗೆ ಸ್ಥಗಿತವಾಗಲಿದೆ ಎಂದು ವರದಿಯಾಗಿದೆ.

ಏತನ್ಮಧ್ಯೆ, ಹಲವಾರು ವಿಮಾನಯಾನ ಸಂಸ್ಥೆಗಳು ಈ ವಿಮಾನ ನಿಲ್ದಾಣಗಳಿಗೆ ತಮ್ಮ ವಿಮಾನಗಳನ್ನು ರದ್ದುಗೊಳಿಸಿವೆ. ಜಮ್ಮು, ಶ್ರೀನಗರ, ಲೇಹ್, ಜೋಧ್‌ ಪುರ, ಅಮೃತಸರ, ಚಂಡೀಗಢ, ಭುಜ್, ಜಾಮ್‌ ನಗರ ಮತ್ತು ರಾಜ್‌ ಕೋಟ್‌ ಗೆ ವಿಮಾನ ರದ್ದತಿ ಘೋಷಿಸಿದ ಏರ್ ಇಂಡಿಯಾ. ಬಾಧಿತ ಪ್ರಯಾಣಿಕರಿಗೆ ಪೂರ್ಣ ಮರುಪಾವತಿ ಅಥವಾ ಒಂದು ಬಾರಿ ಮರು ವೇಳಾಪಟ್ಟಿ ವಿನಾಯಿತಿ ನೀಡಲು ಮುಂದಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ