ಚಾಮರಾಜನಗರಕ್ಕೆ ಮತ್ತೊಮ್ಮೆ ಸಿಎಂ ಭೇಟಿ ನೀಡಲಿರುವ ಸಿಎಂ ಬಸವರಾಜ್ ಬೊಮ್ಮಾಯಿ - Mahanayaka

ಚಾಮರಾಜನಗರಕ್ಕೆ ಮತ್ತೊಮ್ಮೆ ಸಿಎಂ ಭೇಟಿ ನೀಡಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

cm basavaraj bommai
03/12/2022


Provided by

ಚಾಮರಾಜನಗರ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಇದೇ 12ರಂದು ಚಾಮರಾಜನಗರಕ್ಕೆ ಭೇಟಿ ನೀಡಲಿದ್ದು ಈ ಸಂಬಂಧ ಸಿಎಂ ಅವರ ವಿಶೇಷ ಕರ್ತವ್ಯಾಧಿಕಾರಿಯಿಂದ ಜಿಲ್ಲಾಧಿಕಾರಿಗೆ ಪತ್ರ ಬಂದಿದೆ.

ಬೆಳಗ್ಗೆ  10:30ಕ್ಕೆ ಚಾಮರಾಜನಗರಕ್ಕೆ ಬರಲಿದ್ದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ  ಶಂಕುಸ್ಥಾಪನೆ, ಉದ್ಘಾಟನೆ ಮಾಡಲಿದ್ದು ಬಳಿಕ ಮಧ್ಯಾಹ್ನ 1ಕ್ಕೆ ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆಯಲಿದ್ದಾರೆ.

ಚಾಮರಾಜನಗರಕ್ಕೆ ಬಂದರೆ ಸಿಎಂ ಪಟ್ಟ ಹೋಗಲಿದೆ ಎಂಬ ಮೂಢನಂಬಿಕೆ ಬದಿಗೊತ್ತಿ ನಗರದ ಸಿಮ್ಸ್ ಕಾಲೇಜು ಉದ್ಘಾಟನೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು. ಈಗ ಮತ್ತೊಮ್ಮೆ ಚಾಮರಾಜನಗರಕ್ಕೆ  ಬರಲಿದ್ದಾರೆ.  ಕೆರೆ ತುಂಬುವ ಯೋಜನೆ ಸೇರಿದಂತೆ ಹಲವನ್ನು ಘೋಷಣೆ ಮಾಡಲಾಗುವುದು ಎಂದು  ಚಾಮರಾಜನಗರ, ಹನೂರು ಕ್ಷೇತ್ರ ಕಾಂಗ್ರೆಸ್ ನ‌ ಭದ್ರಕೋಟೆಯಾಗಿದ್ದು ಬೊಮ್ಮಾಯಿ ಭೇಟಿಯಲ್ಲಿ ರಾಜಕೀಯ ಲೆಕ್ಕಾಚಾರವೂ ಅಡಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ