ಕರಾವಳಿ ಬೆನ್ನಲ್ಲೇ ಮಲೆನಾಡು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ: ಬಾಳೆಹೊನ್ನೂರಿನಲ್ಲಿ ರೈತರ ಅಹವಾಲು ಸ್ವೀಕರಿಸಿದ ಡಿ.ಕೆ. ಶಿವಕುಮಾರ್ - Mahanayaka
10:40 AM Tuesday 10 - November 2026

ಕರಾವಳಿ ಬೆನ್ನಲ್ಲೇ ಮಲೆನಾಡು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ: ಬಾಳೆಹೊನ್ನೂರಿನಲ್ಲಿ ರೈತರ ಅಹವಾಲು ಸ್ವೀಕರಿಸಿದ ಡಿ.ಕೆ. ಶಿವಕುಮಾರ್

d k shivakumar
19/09/2026

ಶಿವಮೊಗ್ಗ / ಚಿಕ್ಕಮಗಳೂರು:  ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಕರಾವಳಿ ಭಾಗದ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಿದ ಬೆನ್ನಲ್ಲೇ, ಇದೀಗ ಮಲೆನಾಡಿನ ಸಮಗ್ರ ಅಭಿವೃದ್ಧಿ ಹಾಗೂ ಪ್ರದೇಶಕ್ಕೆ ಆರ್ಥಿಕ ಶಕ್ತಿ ತುಂಬಲು ವಿಶೇಷ ಪ್ರವಾಸೋದ್ಯಮ ಪ್ಯಾಕೇಜ್ ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಅವರು ಪ್ರಕಟಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPCMS) 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಈ ವಿಷಯ ತಿಳಿಸಿದರು.

ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಜಿಲ್ಲಾ ಉಸ್ತುವಾರಿ ಸಚಿವರು ತಿಂಗಳಿಗೆ ಕನಿಷ್ಠ ಎರಡು ಬಾರಿಯಾದರೂ ಜಿಲ್ಲೆಗೆ ಭೇಟಿ ನೀಡಿ ‘ಪ್ರಜಾಸೇವೆ’ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕಡ್ಡಾಯ ಸೂಚನೆ ನೀಡಿದರು. ಸರ್ಕಾರ ಸಂಪೂರ್ಣವಾಗಿ ರೈತರ ಪರವಾಗಿದ್ದು, ಪಾರಂಪರಿಕ ಕೃಷಿಗೆ ಯಾವುದೇ ಅಡ್ಡಿಪಡಿಸುವುದಿಲ್ಲ ಹಾಗೂ ಮಲೆನಾಡಿನ ರೈತರಿಗೆ ಹೊಸದಾಗಿ ನೋಟಿಸ್ ಜಾರಿ ಮಾಡದಂತೆ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಜೊತೆಗೆ, ಅಕ್ರಮ-ಸಕ್ರಮ (94ಸಿ) ವಿಚಾರವಾಗಿ ಶೀಘ್ರದಲ್ಲೇ ಪ್ರತ್ಯೇಕ ಸಭೆ ನಡೆಸಿ ಚರ್ಚಿಸಲಾಗುವುದು ಎಂದರು. ರೈತರ ಆದಾಯ ಹೆಚ್ಚಿಸಲು ‘ತೇಗದ ಸಿರಿ’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದ್ದು, ಇದರಡಿ ರೈತರ ಜಮೀನುಗಳಲ್ಲಿ ಗಿಡ ಬೆಳೆಸಲು ಸರ್ಕಾರ ನೆರವು ನೀಡಲಿದೆ. ಮರಗಳನ್ನು ಮಾರಾಟ ಮಾಡಿದಾಗ ಶೇ. 70ರಷ್ಟು ಲಾಭಾಂಶ ರೈತರಿಗೆ ಹಾಗೂ ಶೇ. 30ರಷ್ಟು ಪಾಲು ಸರ್ಕಾರಕ್ಕೆ ಸಿಗಲಿದೆ.

ಕಸ್ತೂರಿ ರಂಗನ್ ವರದಿಯ ಕುರಿತು ಮುಂಬರುವ 3 ದಿನಗಳ ವಿಶೇಷ ಅಧಿವೇಶನದಲ್ಲಿ ಸಮಗ್ರ ಚರ್ಚೆ ನಡೆಸಲಾಗುವುದು. ರಾಜ್ಯದ ಹಿತದೃಷ್ಟಿಯಿಂದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ಒಳಗೊಂಡ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ದು ಪ್ರಧಾನಿಯವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು. ದೇವರು ವರವೂ ಕೊಡುವುದಿಲ್ಲ, ಶಾಪವೂ ಕೊಡುವುದಿಲ್ಲ; ಕೇವಲ ಅವಕಾಶಗಳನ್ನು ನೀಡುತ್ತಾನೆ, ಜನರ ಬದುಕಿಗೆ ಶಕ್ತಿ ತುಂಬುವುದೇ ನಮ್ಮ ಸರ್ಕಾರದ ಆಶಯ ಎಂದು ಡಿಸಿಎಂ ನುಡಿದರು.

ಇನ್ನೊಂದೆಡೆ, ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ಸಾವಿರಾರು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬೆಳಿಗ್ಗೆಯಿಂದಲೇ 12 ಕಿಲೋಮೀಟರ್ ಪಾದಯಾತ್ರೆ ನಡೆಸಿದ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ರೈತರು ಬಾಳೆಹೊನ್ನೂರಿನ ಜೆ.ಸಿ.ಐ. ಸರ್ಕಲ್‌ನಲ್ಲಿ ಜಮಾಯಿಸಿ ಚಿಕ್ಕಮಗಳೂರು–ಶೃಂಗೇರಿ ರಾಜ್ಯ ಹೆದ್ದಾರಿ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಿದರು. ಶ್ರೀ ರಂಭಾಪುರಿ ಮಠದ ಭೇಟಿ ಹಾಗೂ ಭೋಜನದ ನಂತರ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತ ರೈತರಿಂದ ಮನವಿ ಪತ್ರ ಹಾಗೂ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

deneme bonusu veren siteler gamdom giriş deneme bonusu veren siteler