10:26 PM Saturday 23 - August 2025

ಸದನಕ್ಕೆ ಸಿಎಂ ಸುಳ್ಳು ಹೇಳಿದ್ದಾರೆ, ಸ್ಪೀಕರ್ ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ

hd kumaraswamy
20/07/2023

ಬೆಂಗಳೂರು: ಅಧಿಕಾರಿಗಳ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಹಾಗೂ ಸ್ಪೀಕರ್ ಅವರು ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಸ್ಪೀಕರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವ ಮುನ್ನ ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿಗಳು ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ನಡೆಸಿದರು. ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ನಾನು ಸಿಎಂ ಆಗಿದ್ದ ವೇಳೆ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡಿಲ್ಲ. ಅವರನ್ನು ಗೌರವದಿಂದ ನಡೆಸಿಕೊಂಡಿದ್ದೇನೆ. ಪ್ರಮಾಣವಚನ ಸ್ವೀಕಾರ ಸಂದರ್ಭದಲ್ಲಿ ಕೂಡ ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡಿಲ್ಲ.

ಯಾವುದೇ ಸಂದರ್ಭದಲ್ಲಿಯೂ ಅಧಿಕಾರಿಗಳಿಂದ ಯಾರಿಗೂ ಅಥಿತ್ಯ ಕೊಡಿಸಿಲ್ಲ. ಹೀಗೆ ಸುಳ್ಳು ಹೇಳುವುದಕ್ಕೆ ನಾಚಿಕೆ ಆಗಬೇಕು ಇವರಿಗೆ. ನನ್ನ ವಿರುದ್ಧ ದಾಖಲೆ ಇದ್ದರೆ ಬಿಡುಗಡೆ ಮಾಡಿ ಎಂದು ಅವರು ಸವಾಲು ಹಾಕಿದರು.
2018ರಲ್ಲಿ ನನ್ನ ನೇತೃತ್ವದ ಮೈತ್ರಿ ಸರಕಾರ ಪ್ರಮಾಣ ವಚನ ಸ್ವೀಕರಿಸಿದ ವೇಳೆ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಆಗ ರಾಜ್ಯಪಾಲರ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ವ್ಯವಸ್ಥೆಯನ್ನು ಮಾಡಿತ್ತು. ಆದರೆ, ಮೊನ್ನೆ ನಡೆದ ಸಭೆಗೆ ಸ್ವತಃ ಮುಖ್ಯಮಂತ್ರಿಗಳ ಅಧೀನದಲ್ಲಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯೇ ಅಧಿಕಾರಿಗಳಿಗೆ ಆದೇಶ ನೀಡಿದೆ. ತಪ್ಪು ತಪ್ಪೇ ಅಲ್ಲವೇ? ಇದನ್ನು ಒಪ್ಪಿಕೊಳ್ಳಲು ಪ್ರತಿಷ್ಠೆ ಏಕೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸರಕಾರವೇ ನೇರ ಕಾರಣ:

ವಿಧಾನಸಭೆಯಲ್ಲಿ ಬುಧವಾರ ನಡೆದ ಗೊಂದಲಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ. ಸಭಾಧ್ಯಕ್ಷರ ಪೀಠವನ್ನು ದುರ್ಬಳಕೆ ಮಾಡಿಕೊಂಡಿದೆ. ಎರಡು ನಿಮಿಷದಲ್ಲಿ ಬಗೆಹರಿಸುವ ವಿಷಯವನ್ನು ಇಷ್ಟು ದೂರ ಎಳೆದು ತರಲಾಗಿದೆ ಎಂದು ಅವರು ಹೇಳಿದರು.ಸರಕಾರ ಗಂಭೀರ ಲೋಪ ಎಸಗಿದೆ. ಆಗಿರುವ ತಪ್ಪನ್ನು ಒಪ್ಪಿಕೊಳ್ಳುವುದು ಬಿಟ್ಟಿ ಭಂಡತನ ಪ್ರದರ್ಶನ ಮಾಡುತ್ತಿದೆ ಎಂದು ದೂರಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version