ಲಕ್ಷ್ಮಣ ಸವದಿ ಆರೋಪಕ್ಕೆ ಸಿಎಂ ತಿರುಗೇಟು

ಗಾಳಿಯಲ್ಲಿ ಗುಂಡು ಹೊಡೆದರೆ ಪ್ರಯೋಜನವಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಳಗಾವಿ, ಏಪ್ರಿಲ್ 26: ಯಾವ ನಿರ್ದಿಷ್ಟ ಪ್ರಕರಣದಲ್ಲಿ 40 ಪರ್ಸೆಂಟ್ ಹಣ ಪಡೆದಿದ್ದೇವೆ ಎಂದು ಸ್ಪಷ್ಟವಾಗಿ ಹೇಳಬೇಕು.
ಈ ತರಹ ಗಾಳಿಯಲ್ಲಿ ಗುಂಡು ಹೊಡೆಯುವುದರಿಂದ ಪ್ರಯೋಜನ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ 40 ಪರ್ಸೆಂಟ್ ಕಮಿಷನ್ ತನಿಖೆ ಕೈಗೊಳ್ಳಲಾಗುವುದು ಎಂಬ ಲಕ್ಷ್ಮಣ್ ಸವದಿ ಅವರ ಹೇಳಿಕೆಗೆ ಅವರು ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ .ಪ್ರತಿಕ್ರಿಯೆ ನೀಡಿದರು.
ಅವರು ಇಲ್ಲಿ ಇದ್ದಾಗಲೇ ಹೇಳಬಹುದಿತ್ತಲ್ಲ, ಏಕೆ ಸುಮ್ಮನಿದ್ದರು? ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ ಮಾಡಿದರು.
ವರ್ಚಸ್ಸು ಕೆಡಿಸುವ ಪ್ರಯತ್ನ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ ಮುಖ್ಯಮಂತ್ರಿಗಳು, ರಾಜ್ಯದ ಮುಖ್ಯಮಂತ್ರಿ ಗಳನ್ನು ಗುರಿಯಾಗಿಸಿ ಬಿಜೆಪಿ ಇಮೇಜ್ ಕೆಡಿಸಬೇಕು ಅಂತಿದ್ದಾರೆ, ಆದರೆ ಸಾಧ್ಯವಾಗುತ್ತಿಲ್ಲ. ಕಳೆದ ಒಂದೂವರೆ ವರ್ಷದಿಂದ ಸಿದ್ದರಾಮಯ್ಯ ಅವರು ಪ್ರಯತ್ನ ಮಾಡುತ್ತಿದ್ದಾರೆ.
ಕಾಂಗ್ರೆಸ್ ನವರು ಭ್ರಷ್ಟಾಚಾರಿಗಳು
ಆದರೆ ಜನ ನಂಬುತ್ತಿಲ್ಲ, ಏಕೆಂದರೆ ಅವರೇ ದೊಡ್ಡ ಭ್ರಷ್ಟಾಚಾರಿಗಳು ಎಂದರು. ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್. ಭ್ರಷ್ಟಾಚಾರ ಕಾಂಗ್ರೆಸ್ ಪಕ್ಷದ ಅವಿಭಾಜ್ಯ ಅಂಗವಾಗಿದೆ.
ಹೀಗಿರುವಾಗ ಅವರು ಭ್ರಷ್ಟಾಚಾರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದರು
ಲಿಂಗಾಯತ ಲಡಾಯಿ ಇಲ್ಲ
ನಿಮ್ಮ ಹಾಗೂ ಸಿದ್ದರಾಮಯ್ಯ ಮಧ್ಯೆ ಲಿಂಗಾಯತ ಲಡಾಯಿ ಜೋರಾಗಿದೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಲಡಾಯಿ ಏನಿಲ್ಲ, ಅವರೇ ಮಾಡಿಕೊಂಡಿರೋದು.ಅವರೇ ಮಾಡಿಕೊಂಡು ಬೇರೆ ಬೇರೆ ಸ್ಪಷ್ಟೀಕರಣ ಕೊಡುತ್ತ ತಿರುಗುತ್ತಿದ್ದಾರೆ. ಗ್ರೌಂಡ್‌ನಲ್ಲಿ ಲಿಂಗಾಯತರು ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಜನ ಬಹಳ ಪ್ರಬುದ್ಧವಾಗಿದ್ದಾರೆ, ಯಾರಿಗೆ ಯಾವಾಗ ಹೇಗೆ ಬೆಂಬಲ ಮಾಡಬೇಕೆಂದು ಗೊತ್ತಿದೆ ಎಂದರು.
ಬೆಳಗಾವಿ ಜಿಲ್ಲೆಯಲ್ಲಿ ಕನಿಷ್ಠ 15 ಸ್ಥಾನ
ಇಂದು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಪ್ರಚಾರ ಮಾಡುತ್ತಿದ್ದು,
ಎಲ್ಲ ಕಡೆ ರೋಡ್ ಷೋ, ಸಭೆಗಳಲ್ಲಿ ಜನರ ಉತ್ಸಾಹ ದೊಡ್ಡ ಪ್ರಮಾಣದಲ್ಲಿ ಇದೆ. ಬೆಳಗಾವಿ ಜಿಲ್ಲೆಯಲ್ಲಿ ಕನಿಷ್ಠ 15 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದರು.
ಜನಸ್ಪಂದನೆ
ಕೆಲವು ಬದಲಾವಣೆ ಮಾಡಿದ್ದಕ್ಕೂ ಜನ ಸ್ಪಂದಿಸಿದ್ದಾರೆ. ನಾನು ರಾಜ್ಯದ ಉದ್ದಗಲಕ್ಕೂ ಸುತ್ತುತ್ತಿದ್ದೇನೆ.
ನಾಮಪತ್ರ ವಾಪಸ್ ಪ್ರಕ್ರಿಯೆ ಆದಮೇಲೆ ಬಿಜೆಪಿ ಸುನಾಮಿ ಇಡೀ ರಾಜ್ಯದಲ್ಲಿ ಇದೆ. ಬಿಜೆಪಿ ಸ್ಪಷ್ಟ ಬಹುಮತದಿಂದ ಬರಲಿದೆ ಎಂದು ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಎಕ್ಸಿಟ್ ಪೋಲ್ ಆಧಾರ ಮೇಲೆ ಚುನಾವಣಾ ರಣನೀತಿ ಮಾಡುವುದಿಲ್ಲ ಎಂದು ತಿಳಿಸಿದರು.
ಮಾಹಿತಿ ವ್ಯವಸ್ಥೆ ಆಧಾರದ ಮೇಲೆ, ರಣನೀತಿ
ಸಂಖ್ಯೆ ಬಲದಷ್ಟೇ ಉತ್ಸಾಹ ಕೂಡ ದೊಡ್ಡ ಪ್ರಮಾಣದಲ್ಲಿ ಇದೆ. ಈಗ ಬಂದಿರುವುದೆಲ್ಲಾ ಹಳೆಯ ಎಕ್ಸಿಟ್ ಪೋಲ್. ನಮ್ಮದೇ ಆದಂತಹ ಮಾಹಿತಿ ವ್ಯವಸ್ಥೆ ಇದೆ, ಅದರ ಮೇಲೆ ರಣನೀತಿ ಇರುತ್ತದೆ ಎಂದರು.
ಅಭೂತಪೂರ್ವ ಜನಬೆಂಬಲ
ದಕ್ಷಿಣ ಕರ್ನಾಟಕದಿಂದ ಪ್ರಚಾರ ಶುರು ಮಾಡಿ ಉತ್ತರಕ್ಕೆ ಬಂದಿದ್ದು,
ಎಲ್ಲಾ ಕಡೆ ಅಭೂತಪೂರ್ವ ಜನಬೆಂಬಲ ಇದೆ. ವಿಶೇಷವಾಗಿ ಯುವಕರು, ಮಹಿಳೆಯರು ರೈತರು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸುತ್ತಿದ್ದಾರೆ. ನಮ್ಮ ನಿರೀಕ್ಷೆ ಮೀರಿ ಜನಸ್ಪಂದನೆ ಇದೆ ಎಂದು ತಿಳಿಸಿದರು.
ಸ್ಪಷ್ಟ ಬಹುಮತ ಬರುವ ವಿಶ್ವಾಸ
ತಳಮಟ್ಟದಲ್ಲಿ ನಿಜ ಚಿತ್ರಣವನ್ನು ನೋಡುತ್ತಿದ್ದು ಸ್ಪಷ್ಟ ಬಹುಮತ ಬರುವ ವಿಶ್ವಾಸ ಇದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw