ಹುಬ್ಬಳ್ಳಿ ಕಾರ್ಪೋರೇಟರ್ ಪುತ್ರಿಯ ಹತ್ಯೆ ಪ್ರಕರಣ: ಪೊಲೀಸ್ ಅಧಿಕಾರಿಗಳ ಜೊತೆಗೆ ಸಿಎಂ ತುರ್ತು ಸಭೆ

ಬೆಂಗಳೂರು: ಹುಬ್ಬಳ್ಳಿ ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಡಿಜಿ, ಐಜಿಪಿಗಳಿಗೆ ಬುಲಾವ್ ನೀಡಿದ್ದು, ಸಿಎಂ ನಿವಾಸಕ್ಕೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಭೇಟಿ ನೀಡಿದ್ದಾರೆ.
ಪೊಲೀಸ್ ಅಧಿಕಾರಿಗಳ ಜೊಗೆ ಸಿಎಂ ಸಿದ್ದರಾಮಯ್ಯ ಸುಮಾರು ಒಂದು ಗಂಟೆಗಳ ಕಾಲ ಮಹತ್ವದ ಮಾತುಕತೆ ನಡೆಸಿದ್ದು, ನೇಹಾ ಹಿರೇಮಠ್ ಹತ್ಯೆ ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಆರೋಪಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth