ಆಯುಷ್ಮಾನ್ ಭಾರತ್ ಯೋಜನೆಗೆ ದಿಲ್ಲಿ ಸಿಎಂ ರೇಖಾ ಗುಪ್ತಾ ನೇತೃತ್ವದ ಸಂಪುಟ ಅನುಮೋದನೆ - Mahanayaka

ಆಯುಷ್ಮಾನ್ ಭಾರತ್ ಯೋಜನೆಗೆ ದಿಲ್ಲಿ ಸಿಎಂ ರೇಖಾ ಗುಪ್ತಾ ನೇತೃತ್ವದ ಸಂಪುಟ ಅನುಮೋದನೆ

21/02/2025


Provided by

ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ದೆಹಲಿ ಕ್ಯಾಬಿನೆಟ್ ಗುರುವಾರ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನ ಮತ್ತು ಹೊಸ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ 14 ಸಿಎಜಿ ವರದಿಗಳನ್ನು ಮಂಡಿಸಲು ಅನುಮೋದನೆ ನೀಡಿದೆ. ಹೊಸ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸಿಎಂ ಗುಪ್ತಾ, ಈ ಯೋಜನೆ ಇರುತ್ತದೆ ಎಂದು ಹೇಳಿದ್ದಾರೆ.


Provided by

ಈ‌ಹಿಂದಿನ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ನಗರದಲ್ಲಿ ಆರೋಗ್ಯ ಯೋಜನೆಗೆ ಅವಕಾಶ ನೀಡಿರಲಿಲ್ಲ. ಜನರು ಅದರ ಪ್ರಯೋಜನಗಳನ್ನು ಪಡೆಯುವುದಕ್ಕೆ ಆಗಲಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹೇಳಿದ್ದಾರೆ.

ಮೊದಲ ಕ್ಯಾಬಿನೆಟ್ ಸಭೆಯಲ್ಲಿ, ನಾವು ಎರಡು ಕಾರ್ಯಸೂಚಿಗಳನ್ನು ಚರ್ಚಿಸಿ ಅಂಗೀಕರಿಸಿದ್ದೇವೆ. ದೆಹಲಿಯಲ್ಲಿ 5 ಲಕ್ಷ ರೂ.ಗಳ ಟಾಪ್ ಅಪ್ ನೊಂದಿಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರುವುದು ಮತ್ತು ವಿಧಾನಸಭೆಯ ಮೊದಲ ಆಸನದಲ್ಲಿ 14 ಸಿಎಜಿ ವರದಿಗಳನ್ನು ಮಂಡಿಸುವುದು” ಎಂದು ಗುಪ್ತಾ ಹೇಳಿದ್ದಾರೆ.


Provided by

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ