ಸಿಎಂ ಸಿದ್ದರಾಮಯ್ಯ  ಆಸ್ಪತ್ರೆಗೆ ದಾಖಲು - Mahanayaka

ಸಿಎಂ ಸಿದ್ದರಾಮಯ್ಯ  ಆಸ್ಪತ್ರೆಗೆ ದಾಖಲು

siddaramaiah
02/02/2025

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಹೀಗಾಗಿ ಇಂದು ನಿಗದಿಯಾಗಿದ್ದ  ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ.

ಸಿಎಂ ಸಿದ್ದರಾಮಯ್ಯನವರ ಎಡಗಾಲಿನ ಮಂಡಿನೋವು ಹೆಚ್ಚಾಗಿದ್ದು, ಹೀಗಾಗಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದ ಸಿದ್ದರಾಮಯ್ಯನವರಿಗೆ ಇದೀಗ ಮತ್ತೆ  ಅದೇ ಜಾಗದಲ್ಲಿ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆಗಳಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಸದ್ಯ 2 ದಿನಗಳ ಕಾಲ ಯಾವುದೇ ಪ್ರಯಾಣ ಮಾಡದೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.  ಇಂದು ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯನವರು ಪ್ರವಾಸ ಮಾಡಬೇಕಿತ್ತು. ಸಕಲ ಸಿದ್ಧತೆಗಳ ನಡುವೆಯೇ ಅನಾರೋಗ್ಯದ ಹಿನ್ನೆಲೆ ದಿಢೀರ್ ಪ್ರವಾಸ ರದ್ದಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ