12:56 PM Saturday 23 - August 2025

ಪಲ್ಲಕ್ಕಿ ಬಸ್ ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

pallakki bus
07/10/2023

ಬೆಂಗಳೂರು: ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 100 ನೂತನ ಕರ್ನಾಟಕ ಸಾರಿಗೆ,40 ಹವಾ ನಿಯಂತ್ರಣ ರಹಿತ ಸ್ಲೀಪರ್ (ಪಲ್ಲಕ್ಕಿ) ಬಸ್ಸುಗಳು ಹಾಗೂ    ಪಾಯಿಂಟ್ ಟು ಪಾಯಿಂಟ್ (Point to Point) ಕಾರ್ಯಾಚರಣೆಗೆ ನೂತನ ಮಾದರಿಯ ಮೇಲ್ದರ್ಜೆಗೇರಿಸಿದ ಕರ್ನಾಟಕ ಸಾರಿಗೆ ಬಸ್ಸುಗಳಿಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ  ರಾಜಕೀಯ ಸಲಹೆಗಾರ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

Exit mobile version