ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ!

ಮಡಿಕೇರಿ: ಚುನಾವಣೆ ಕಳೆದ ಬಳಿಕ ಗೃಹ ಲಕ್ಷ್ಮೀ ಹಣ ಬಂದಿಲ್ಲ, ಗೃಹ ಲಕ್ಷ್ಮೀ ಯೋಜನೆಯನ್ನು ಕಾಂಗ್ರೆಸ್ ನಿಲ್ಲಿಸುತ್ತದೆಯೇ ಎಂದು ಆತಂಕದಲ್ಲಿದ್ದ ಗೃಹ ಲಕ್ಷ್ಮೀ ಫಲಾನುಭವಿಗಳಿಗೆ ಇದೀಗ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ.
ಮಡಿಕೇರಿಯಲ್ಲಿ ನೆರೆಹಾನಿಯ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೇ ತಿಂಗಳವರೆಗೆ ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಯಜಮಾನಿಯರಿಗೆ ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ. ಇನ್ನೂ ಎರಡು ತಿಂಗಳು ಪಾವತಿ ಮಾಡುವುದು ಬಾಕಿ ಇದೆ ಎಂದರು.
ರಾಜ್ಯ ಸರ್ಕಾರದಿಂದ ಗೃಹ ಲಕ್ಷ್ಮೀ ಯೋಜನೆಯ ಬಾಕಿ ಹಣ ಪಾವತಿಗೆ ಕ್ರಮ ವಹಿಸಲಾಗಿದೆ. ಮೇ ತಿಂಗಳ ಗೃಹ ಲಕ್ಷ್ಮೀ ಯೋಜನೆ ಹಣದ ನಂತ್ರ ಜೂನ್, ಜುಲೈ ತಿಂಗಳ 2000 ಹಣವನ್ನು ಒಟ್ಟಿಗೆ ಪಾವತಿ ಮಾಡುವಂತೆ ಸೂಚಿಸಲಾಗಿದೆ. ಕೆಲವೇ ದಿನಗಳಲ್ಲಿ ಗೃಹ ಲಕ್ಷ್ಮೀ ಯೋಜನೆಯ 2 ತಿಂಗಳ ಬಾಕಿ ಹಣ ಯಜಮಾನಿಯರ ಖಾತೆಗೆ ಜಮಾ ಆಗಲಿದೆ ಎಂಬುದಾಗಿ ಅಭಯ ನೀಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: