ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು - Mahanayaka
1:05 AM Wednesday 17 - December 2025

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು

siddaramaiah
17/12/2025

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದೆ. ಬುಧವಾರ ಮಧ್ಯಾಹ್ನದಿಂದ ಅವರಿಗೆ ಹೊಟ್ಟೆ ನೋವು ಮತ್ತು ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವೈದ್ಯರ ಸಲಹೆಯಂತೆ ಅವರು ಅಧಿವೇಶನಕ್ಕೆ ಗೈರಾಗಿ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, “ತಂದೆಯವರಿಗೆ ಸಣ್ಣ ಪ್ರಮಾಣದ ಗ್ಯಾಸ್ಟ್ರೋ ಇನ್ಫೆಕ್ಷನ್ ಆಗಿದೆ. ಪ್ರಸ್ತುತ ಅವರು ವೈದ್ಯರ ಚಿಕಿತ್ಸೆಯಲ್ಲಿದ್ದು, ಆರೋಗ್ಯ ಸ್ಥಿರವಾಗಿದೆ. ಆತಂಕ ಪಡುವ ಅಗತ್ಯವಿಲ್ಲ,” ಎಂದು ಸ್ಪಷ್ಟಪಡಿಸಿದರು.

ವಿಷಯ ತಿಳಿಯುತ್ತಿದ್ದಂತೆಯೇ ಸಚಿವರಾದ ಬೈರತಿ ಸುರೇಶ್ ಹಾಗೂ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಗಣ್ಯರು ಸರ್ಕ್ಯೂಟ್ ಹೌಸ್‌ ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಸಚಿವ ಬೈರತಿ ಸುರೇಶ್ ಮಾತನಾಡಿ, “ಸಿಎಂ ಅವರು ಆರೋಗ್ಯವಾಗಿದ್ದಾರೆ, ನಾಳೆ ಅಧಿವೇಶನಕ್ಕೆ ಹಾಜರಾಗಿ ಪ್ರಮುಖ ಚರ್ಚೆಗಳಿಗೆ ಉತ್ತರಿಸಲಿದ್ದಾರೆ,” ಎಂದು ತಿಳಿಸಿದರು. ಸಿಎಂ ಅವರ ಇಂದಿನ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಸದ್ಯಕ್ಕೆ ರದ್ದುಗೊಳಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ