ಬಿಜೆಪಿ ಕಾಲದಲ್ಲಿ ಆದ ಬ್ಲಾಸ್ಟ್ ಗೆ ಅಲ್ಪಸಂಖ್ಯಾತರ ತುಷ್ಟೀಕರಣ ಕಾರಣವಾ?: ಬಿಜೆಪಿ ಆರೋಪಕ್ಕೆ ಸಿಎಂ ತಿರುಗೇಟು

ಮೈಸೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್ ಪ್ರಕರಣಕ್ಕೂ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೂ ಯಾವುದೇ ಲಿಂಕ್ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ಮಾಸ್ಕ್, ಟೋಪಿ ಹಾಕಿಕೊಂಡು ಬಂದು ಸ್ಫೋಟಿಸಿದ್ದಾನೆ. ಆರೋಪಿಯು ಬಸ್ನಿಂದ ಇಳಿದು ಹೋಟೆಲ್ಗೆ ಹೋಗಿದ್ದಾನೆ. ಆರೋಪಿ ಬಸ್ನಿಂದ ಇಳಿದು ಹೋಗಿರುವ ದೃಶ್ಯಾವಳಿಗಳು ಪತ್ತೆಯಾಗಿವೆ. ಆರೋಪಿ ಕಪ್ಪು ಬಣ್ಣದ ಮಾಸ್ಕ್ ಹಾಕಿಕೊಂಡು ಬಂದಿದ್ದನು. ಆರೋಪಿ ಟೋಪಿ ಹಾಕಿಕೊಂಡು ಬಂದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೋಟೆಲ್ನಲ್ಲಿ ತಿಂಡಿಯ ಟೋಕನ್ ತೆಗೆದುಕೊಂಡಿದ್ದಾನೆ. ನಂತರ ಹೋಟೆಲ್ನಲ್ಲಿ ಕುಳಿತು ಟೈಮರ್ ಫಿಕ್ಸ್ ಮಾಡಿದ್ದಾನೆ. ಟೈಮರ್ ಫಿಕ್ಸ್ ಮಾಡಿ ಇಟ್ಟು ಹೋಟೆಲ್ನಿಂದ ಹೊರಹೋಗಿದ್ದಾನೆ. ಬಳಿಕ ಬ್ಲಾಸ್ಟ್ ಆಗಿದೆ ಎಂದರು.
ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಇದು ಓರ್ವ ವ್ಯಕ್ತಿಯ ಕೃತ್ಯವಾ ಅಥವಾ ಸಂಘಟನೆಯ ಕೃತ್ಯವಾ ಗೊತ್ತಿಲ್ಲ. ಭಯೋತ್ಪಾದಕ ಕೃತ್ಯನಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ತಿಳಿಸಿದರು.
ಅಲ್ಪಸಂಖ್ಯಾತ ತುಷ್ಟೀಕರಣದಿಂದ ಇಂತಹ ಕೃತ್ಯ ನಡೆದಿದೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯ ಕಾಲದಲ್ಲಿ ಆದ ಬಾಂಬ್ ಬ್ಲಾಸ್ಟ್ ಗಳಿಗೆ ಏನು ಕಾರಣ? ಅದು ಅಲ್ಪಸಂಖ್ಯಾತರ ತುಷ್ಟೀಕರಣವಾ? ಬಿಜೆಪಿ ರಾಜಕೀಯಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದೆ. ಅಲ್ಪಸಂಖ್ಯಾರಿಗೂ ಇದಕ್ಕೂ ಏನು ಸಂಬಂಧ? ಬಿಜೆಪಿ ಇದನ್ನು ರಾಜಕೀಯ ಮಾಡುತ್ತಿದೆ ಅಷ್ಟೆ ಎಂದರು.