ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಯತ್ನಾಳ್ ರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು: ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಸ್ವಸ್ಥರಾಗಿದ್ದ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಯತ್ನಾಳ್ ಅಸ್ವಸ್ಥಗೊಂಡಿದ್ದರು ಅವರನ್ನು ತಕ್ಷಣವೇ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಇದೀಗ ಸ್ಥಿರವಾಗಿದೆ.
ಬಿಜೆಪಿ ಸದಸ್ಯರ ವರ್ತನೆಗೆ ಸಿಎಂ ಖಂಡನೆ:
ಪ್ರಜಾಪ್ರಭುತ್ವದ ಯಶಸ್ಸಿಗೆ ಪ್ರಬಲ ವಿರೋಧ ಪಕ್ಷದ ಪಾತ್ರ ಬಹುಮುಖ್ಯ. ವಿರೋಧ ಪಕ್ಷಗಳು ಸರ್ಕಾರದ ತಪ್ಪು ನಿರ್ಧಾರಗಳನ್ನು, ನೀತಿ ನಡವಳಿಕೆಯನ್ನು ಸಂವಿಧಾನಾತ್ಮಕವಾಗಿ ಖಂಡಿಸಲು, ವಿರೋಧಿಸಲು, ಪ್ರತಿಭಟಿಸಲು ಅವಕಾಶವಿದೆ. ಸದನವು ಕೆಲವು ನಿಯಮಾವಳಿಗಳನ್ನು, ವಿಧಾನ ಸಭಾಧ್ಯಕ್ಷರ ಸ್ಥಾನವು ತನ್ನದೇ ಆದ ಘನತೆ ಗೌರವವನ್ನು ಹೊಂದಿದೆ. ಪತ್ರಿಕೆಗಳನ್ನು ಹರಿದು ಗೌರವಾನ್ವಿತ ಸಭಾಧ್ಯಕ್ಷರ ಮುಖಕ್ಕೆ ಎಸೆಯುವುದು ಅಸಭ್ಯ ಅಷ್ಟೇ ಅಲ್ಲ ಸಂಸದೀಯ ವ್ಯವಸ್ಥೆಗೆ ತೋರುವ ಅಗೌರವವಾಗುತ್ತದೆ. ಬಿಜೆಪಿಯವರು ಕ್ಷುಲ್ಲಕ ಕಾರಣಕ್ಕೆ ಇಂದು ಸದನದ ಬಾವಿಗಿಳಿದು ಪ್ರತಿಭಟನೆ ಮಾಡಿದ್ದಾರೆ, ಆದರೆ ಅವರ ಜೊತೆ ಜೆಡಿಎಸ್ ನವರು ಸೇರಿ ಪ್ರತಿಭಟಿಸಿರುವುದು ವಿಪರ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw