ಬದ್ಧ ರಾಜಕೀಯ ವೈರಿಗಳಂತಿದ್ದ ಸಿಎಂ ಸಿದ್ದರಾಮಯ್ಯ, ವಿ.ಶ್ರೀನಿವಾಸ್ ಪ್ರಸಾದ್ ಭೇಟಿ!

ಚಾಮರಾಜನಗರ: ರಾಜಕೀಯದಲ್ಲಿ ಬದ್ಧ ವೈರಿಗಳಂತಿದ್ದ ವಿ.ಶ್ರೀನಿವಾಸ್ ಪ್ರಸಾದ್ ಹಾಗೂ ಸಿಎಂ ಸಿದ್ದರಾಮಯ್ಯನವರು ಮತ್ತೆ ಭೇಟಿಯಾಗಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶ್ರೀನಿವಾಸ್ ಪ್ರಸಾದ್ ಹಾಗೂ ಸಿದ್ದರಾಮಯ್ಯನವರ ಭೇಟಿ ಬಹಳ ಪ್ರಾಮುಖ್ಯತೆ ಪಡೆದಿದೆ.
ಶ್ರೀನಿವಾಸ್ ಪ್ರಸಾದ್ ಅವರ ಭೇಟಿಯ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಹಿರಿಯ ರಾಜಕಾರಣಿ, ಚಾಮರಾಜನಗರದ ಹಾಲಿ ಸಂಸದರಾದ ಶ್ರೀನಿವಾಸ್ ಪ್ರಸಾದ್ ಅವರ ಮೈಸೂರಿನ ನಿವಾಸಕ್ಕೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದೆ ಎಂದು ಬರೆದುಕೊಂಡಿದ್ದಾರೆ.
ಚುನಾವಣೆ ಘೋಷಣೆಯಾದಂದಿನಿಂದ ವಿ.ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್ ಗೆ ಬೆಂಬಲ ನೀಡಲಿದ್ದಾರೆ ಎನ್ನುವ ಹಲವು ವದಂತಿಗಳು ಹರಿದಾಡಿತ್ತು. ಇದೀಗ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಪ್ರಸಾದ್ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth