ಕಟ್ಟಡ ದುರಂತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

siddaramaiah
24/10/2024

ಬೆಂಗಳೂರು: ಬಾಬುಸಾಬ್‌ ಪಾಳ್ಯ ಕಟ್ಟಡ ದುರಂತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಅನುಮತಿ ಪಡೆಯದೆ ಕಟ್ಟುತ್ತಿರುವ ಕಟ್ಟಡವನ್ನ ಕೂಡಲೇ ನಿಲ್ಲಿಸಲು ಇದೇ ವೇಳೆ ಸೂಚನೆ ನೀಡಿದ  ಸಿಎಂ , ಮೃತರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 2 ಲಕ್ಷ ರೂ. ಹಾಗೂ ಪಾಲಿಕೆಯಿಂದ ಮೂರು ತಲಾ ಲಕ್ಷ ರೂ. ಪರಿಹಾರ ಕೂಡಲೇ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ನಿನ್ನೆ ಇರಲಿಲ್ಲ, ವಯನಾಡಿಗೆ ಹೋಗಿದ್ದೆ. ಗಾಯಗೊಂಡಿರುವವರಿಗೆ ಸರ್ಕಾರ ಆಸ್ಪತ್ರೆಯ ಖರ್ಚು ಭರಿಸುತ್ತದೆ. ಮೃತರ ಶವಗಳನ್ನು ಕಳಿಸಿಕೊಡುವ ಕೆಲಸ ಕೂಡ ಮಾಡಲಾಗುತ್ತದೆ ಎಂದು ಹೇಳಿದರು.

ಅನುಮತಿ ಪಡೆಯದೆ ಕಟ್ಟಿರುವ ಕಟ್ಟಡ ಇದು. ನೋಟಿಸ್ ನೀಡಿದರೂ ಕಟ್ಟಡ ಕಟ್ಟಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಜೋನಲ್ ಐಎಎಸ್ ಅಧಿಕಾರಿ ಹಾಗೂ ಎಕ್ಸ್ಯೂಟಿವ್ ಎಂಜಿನಿಯರ್‌ಗೆ ನೋಟಿಸ್ ಕೊಡಲು ಸೂಚಿಸಲಾಗಿದೆ ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version