6:02 AM Thursday 23 - October 2025

ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!

c m siddaramaya 1
09/06/2023

ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಇಡಿ ದೇಶದ ಗಮನವನ್ನೇ ಸೆಳೆದಿದೆ. ಅದರಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಾಗಿರುವ ಶಕ್ತಿ ಅತ್ಯಂತ ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿದೆ.

ಜೂನ್ 11 ರಂದು ಶಕ್ತಿ ಯೋಜನೆಗೆ ವಿಶೇಷ ರೂಪದಲ್ಲಿ ಚಾಲನೆ ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ತಾವೇ ಬಸ್ ಕಂಡಕ್ಟರ್ ಆಗಿ ಮಹಿಳೆಯರಿಗೆ ಉಚಿತ ಟಿಕೆಟ್ ವಿತರಿಸಲಿದ್ದಾರೆ. ಬಿಎಂಟಿಸಿ ಬಸ್ ನಲ್ಲಿ ಟಿಕೆಟ್ ವಿತರಿಸಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ.

ಇದೇ ಭಾನುವಾರದಂದು ಈ ಯೋಜನೆಗೆ ಚಾಲನೆ ಸಿಗಲಿದೆ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಇದೀಗ ವಿಭಿನ್ನವಾಗಿ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಸ್ವತಃ ಬಸ್ನ ಕಂಡಕ್ಟರ್ ಆಗಲಿದ್ದಾರೆ.

ಮೆಜೆಸ್ಟಿಕ್ನಿಂದ ವಿಧಾನಸೌಧ ಮಾರ್ಗದ ಬಿಎಂಟಿಸಿ ಬಸ್ನಲ್ಲೇ ಸಿದ್ದರಾಮಯ್ಯ ಕಂಡಕ್ಟರ್ ಆಗಲಿದ್ದಾರೆ. ರೂಟ್ ನಂ.43 ಬಸ್ನಲ್ಲಿ ಕಂಡಕ್ಟರ್ ರೀತಿ ಮಹಿಳೆಯರಿಗೆ ಉಚಿತ ಟಿಕೆಟ್ ವಿತರಿಸಲಿದ್ದಾರೆ. ನಂತರ ವಿಧಾನಸೌಧದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಅಂದೇ ಜಿಲ್ಲೆಗಳಲ್ಲಿ ಸಚಿವರಿಂದ ಏಕಕಾಲದಲ್ಲಿ ಯೋಜನೆಗೆ ಚಾಲನೆ ಸಿಗಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version