ಇಂದು RCB ತಂಡವನ್ನು ಅಭಿನಂದಿಸಲಿರುವ ಸಿಎಂ ಸಿದ್ದರಾಮಯ್ಯ - Mahanayaka

ಇಂದು RCB ತಂಡವನ್ನು ಅಭಿನಂದಿಸಲಿರುವ ಸಿಎಂ ಸಿದ್ದರಾಮಯ್ಯ

ipl
04/06/2025


Provided by

ಬೆಂಗಳೂರು: ಐಪಿಎಲ್ –2025ನ್ನು ಕಪ್ ಗೆದ್ದು ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಇನ್ನು ಕೆಲವೇ ಹೊತ್ತಿನಲ್ಲಿ ಬೆಂಗಳೂರಿಗೆ ಆಗಮಿಸಲಿದ್ದು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ.

ಸಂಜೆ 6 ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಆರ್ ಸಿಬಿ ಆಟಗಾರರ ಸಂಭ್ರಮಾಚರಣೆ ನಡೆಯಲಿದೆ. ಅದಕ್ಕೂ ಮೊದಲು ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ತಂಡದ ಆಟಗಾರರ ವಿಜಯೋತ್ಸವ ಮೆರವಣಿಗೆಯನ್ನು ನಡೆಸುವುದೆಂದು ತೀರ್ಮಾನವಾಗಿತ್ತು.

ಆದರೆ ವಿಜಯೋತ್ಸವ ಮೆರವಣಿಗೆ ಕೊನೆಕ್ಷಣದಲ್ಲಿ ರದ್ದಾಗಿದೆ. ತೆರೆದ ವಾಹನದಲ್ಲಿ ಆರ್ ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ ಎಂದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಆರ್ ಸಿಬಿ ತಂಡದ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಸಲಾಗುವುದು. ಈ ವೇಳೆ ಆರ್ ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ. ನಂತರ ಎಲ್ಲಾ ಆಟಗಾರರು ಬಸ್ನಲ್ಲೇ ವಿಧಾನಸೌಧದಿಂದ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ