ಪರಿಹಾರ ರೂಪದಲ್ಲಿ ಪಡೆದಿದ್ದ ಜಮೀನು ಹಿಂದುರುಗಿಸಿದ ಸಿಎಂ ಸಿದ್ದರಾಮಯ್ಯ ಪತ್ನಿ - Mahanayaka
1:20 AM Tuesday 10 - December 2024

ಪರಿಹಾರ ರೂಪದಲ್ಲಿ ಪಡೆದಿದ್ದ ಜಮೀನು ಹಿಂದುರುಗಿಸಿದ ಸಿಎಂ ಸಿದ್ದರಾಮಯ್ಯ ಪತ್ನಿ

siddaramaiah
01/10/2024

ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಮ್ಮ ಪತ್ನಿ ಮೂಡಾಕ್ಕೆ ಜಾಮೀನು ವಾಪಸ್ ಪಡೆಯಲು ಮನವಿ ಸಲ್ಲಿಸಿ ಬರೆದಿರುವ ಪತ್ರವನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ,  ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು.  ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ