11:39 AM Friday 19 - December 2025

ತಮಿಳುನಾಡಿನ 12 ಮಂದಿ ಮೀನುಗಾರರನ್ನು ಬಂಧಿಸಿದ ಮಾಲ್ಡೀವ್ಸ್ ಕೋಸ್ಟ್ ಗಾರ್ಡ್: ಕ್ರಮ ಕೈಗೊಳ್ಳಿ ಎಂದ ಎಂ.ಕೆ. ಸ್ಟಾಲಿನ್

29/10/2023

ತಮಿಳುನಾಡಿಗೆ ಸೇರಿದ ಸುಮಾರು 12 ಮಂದಿ ಮೀನುಗಾರರನ್ನು ಮಾಲ್ಡೀವ್ಸ್ ಕೋಸ್ಟ್ ಗಾರ್ಡ್ ಬಂಧಿಸಿದೆ. ಅವರ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ಅಕ್ಟೋಬರ್ 1 ರಂದು ತೂತುಕುಡಿ ಜಿಲ್ಲೆಯಿಂದ ಯಾಂತ್ರೀಕೃತ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರನ್ನು ಮಾಲ್ಡೀವ್ಸ್ ಕೋಸ್ಟ್ ಗಾರ್ಡ್ ಅಕ್ಟೋಬರ್ 23 ರಂದು ತಿನಾಧೂ ದ್ವೀಪದ ಬಳಿ ಬಂಧಿಸಿದೆ ಎಂದು ತಿಳಿಸಿದ್ದಾರೆ.

‘ಬಂಧಿತ ಮೀನುಗಾರರನ್ನು ಮತ್ತು ಅವರ ದೋಣಿಯನ್ನು ಶೀಘ್ರವಾಗಿ ಬಿಡುಗಡೆ ಮಾಡಲು ರಾಜತಾಂತ್ರಿಕ ಮಾರ್ಗಗಳ ಮೂಲಕ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ನಾನು ನಿಮ್ಮನ್ನು ವಿನಂತಿಸುತ್ತೇನೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version