15 ದಿನಗಳವರೆಗೆ ಪ್ರತಿಭಟನೆ, ಧಾರ್ಮಿಕ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ನಿರ್ಬಂಧ - Mahanayaka
5:49 AM Thursday 15 - January 2026

15 ದಿನಗಳವರೆಗೆ ಪ್ರತಿಭಟನೆ, ಧಾರ್ಮಿಕ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ನಿರ್ಬಂಧ

yediyurappa
29/03/2021

ಬೆಂಗಳೂರು: ಮುಂದಿನ 15 ದಿನಗಳ ಕಾಲ ಪ್ರತಿಭಟನೆ, ಚಳುವಳಿ ನಡೆಸುವಂತಿಲ್ಲ. ಮೇಳ, ಧಾರ್ಮಿಕ ಕಾರ್ಯಕ್ರಮ ಮೊದಲಾದವುಗಳನ್ನು ನಡೆಸಲು ನಿರ್ಬಂಧ ಹಾಕಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಯಾವುದೇ ಲಾಕ್ ಡೌನ್, ನೈಟ್ ಕರ್ಫ್ಯೂ ವಿಧಿಸುವುದಿಲ್ಲ. ನಾಳೆಯಿಂದ ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ ಅವರು ಶಾಲೆಗಳು ತೆರೆದಿರುತ್ತವೆ. ಇನ್ನೂ 1ರಿಂದ 9ನೇ ತರಗತಿಯವರೆಗೆ  ಕಡ್ಡಾಯವಾಗಿ ಪಾಸ್ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಕೊವಿಡ್ ನಿರ್ವಹಣೆಗೆ ಅನುದಾನದ ಕೊರತೆ ಇಲ್ಲ.ಈಗಾಗಲೇ 150 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಗತ್ಯ ಬಿದ್ದರೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ