ಸಿಎಂ ಪ್ರವಾಸ ಹಿನ್ನೆಲೆ  ರೈತರನ್ನು ವಶಕ್ಕೆ ಪಡೆದಿದ್ದು ಖಂಡಿಸಿ ರಸ್ತೆ ತಡೆ - Mahanayaka
2:55 PM Wednesday 9 - September 2026

ಸಿಎಂ ಪ್ರವಾಸ ಹಿನ್ನೆಲೆ  ರೈತರನ್ನು ವಶಕ್ಕೆ ಪಡೆದಿದ್ದು ಖಂಡಿಸಿ ರಸ್ತೆ ತಡೆ

protest
17/11/2023

ಚಾಮರಾಜನಗರ:- ರಾಜ್ಯ ಕಬ್ಬು ಬೆಳೆಗಾರರ ಸಂಘದ‌ ತಾಲೂಕು ಅಧ್ಯಕ್ಷ ಹಾಲಿನ‌ ನಾಗರಾಜು ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ರೈತರು ರಸ್ತೆ ನಡೆಸಿ ಪ್ರತಿಭಟನೆ ನಡೆಸಿದರು.

ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಚಾಮರಾಜನಗರ- ಗುಂಡ್ಲುಪೇಟೆ ಮುಖ್ಯರಸ್ತೆಯನ್ನು ತಡೆದು ಕೆಲಕಾಲ ಧರಣಿ ನಡೆಸಿದ ರೈತ ಮುಖಂಡರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನೆಲೆಯಲ್ಲಿ, ಸಿಎಂ ವಿರುದ್ಧ ಯಾವುದೇ ಪ್ರತಿಭಟನೆಗಳನ್ನು ನಡೆಸಬಾರದು ಎಂದು ಮುನ್ನೆಚ್ಚರಿಕಾ ಕ್ರಮವಾಗಿ ನಮ್ಮ ಸಂಘದ ತಾಲೂಕು ಅಧ್ಯಕ್ಷರಾದ ಹಾಲಿನ ನಾಗರಾಜು ಅವರನ್ನು ಇಂದು ಮುಂಜಾನೆ ನಾಲ್ಕು ಗಂಟೆಯ ವೇಳೆಯಲ್ಲಿ ಪೊಲೀಸರು ಬಂಧಿಸಿರುವುದು ಖಂಡನೀಯ ಎಂದು ಧರಣಿ ನಿರತರು ಅಸಮಾಧಾನ ಹೊರಹಾಕಿದರು.

ಸಿಎಂ ಅವರು ಬರ ಪರಿಹಾರ ಕೊಟ್ಟಿಲ್ಲ. 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದು ಹೇಳಿ ಈಗ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ಕಬ್ಬಿನ ಬಾಕಿ ಹಣವನ್ನು ನೀಡಿಲ್ಲ. ಅದರ ಹಣ ಜಿಲ್ಲೆಗೆ 9.5 ಕೋಟಿ ರೂ. ಬರಬೇಕು. ಅದನ್ನು ಕೇಳಲು ಹೋದರೆ ರೈತರನ್ನು ಬಂಧಿಸುವುದು ಎಷ್ಟರ ಮಟ್ಟಿಗೆ ಸರಿ. ಇದೇ ರೀತಿ ಹೋದರೆ, ಮುಂದಿನ ದಿನಗಳಲ್ಲಿ ಜನಪ್ರತಿನಿಧಿಗಳು ಎಲ್ಲೇ ಬಂದರೂ ಅವರ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti