ಕಾಫಿ ತೋಟದಲ್ಲಿ ಪ್ರತ್ಯಕ್ಷವಾದ ಚಿರತೆ: ಬಲೆ ಬೀಸಿ ಹಿಡಿದ ಅರಣ್ಯ ಅಧಿಕಾರಿಗಳು - Mahanayaka
3:17 PM Sunday 14 - September 2025

ಕಾಫಿ ತೋಟದಲ್ಲಿ ಪ್ರತ್ಯಕ್ಷವಾದ ಚಿರತೆ: ಬಲೆ ಬೀಸಿ ಹಿಡಿದ ಅರಣ್ಯ ಅಧಿಕಾರಿಗಳು

mudigere
18/10/2022

ಮೂಡಿಗೆರೆ: ತಾಲೂಕಿನ ದೇವವೃಂದ ಗ್ರಾಮದ ರಮೇಶ್ ಎಂಬುವರ ತೋಟದಲ್ಲಿ ಮಂಗಳವಾರ ಸಂಜೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.


Provided by

ದೇವವೃಂದ ಗ್ರಾಮದ ರಮೇಶ್ ಎಂಬುವರ ತೋಟದಲ್ಲಿ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಕಾಫಿ ಗಿಡಗಳ ನಡುವೆ ಚಿರತೆ ಇರುವುದು ಕಂಡು ಬಂದಿದೆ. ಅದನ್ನು ಗಮನಿಸಿದ ಕೂಲಿ ಕಾರ್ಮಿಕರು ತೋಟದ ಮಾಲೀಕರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು ಬಲೆಯಲ್ಲಿ ಬಂಧಿಸಿದರು. ಚಿರತೆ ಗಾಯಗೊಂಡಿದ್ದರಿಂದ ಮೂಡಿಗೆರೆ ಪಶು ಆಸ್ಪತ್ರೆಗೆ ಕರೆ ತಂದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.

ಚಿರತೆಯ ಆರೋಗ್ಯ ಸುಧಾರಿಸುವ ಲಕ್ಷಣ  ಗಮನಿಸಿ ಚಿರತೆಯನ್ನು ಸಂಬಂಧಿಸಿದ ಮೃಗಾಲಯ ಅಥವಾ ಕಾಡಿಗೆ ಬಿಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನಿಡಿದ್ದಾರೆ.

ಆರ್ ಎಫ್‍ ಒ ಮೋಹನ್ ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಚೇತನ್, ಶಿವಕುಮಾರ್, ಗಾರ್ಡ್‍ಗಳಾದ  ಕುಮಾರ್, ಗಿರೀಶ್, ಮೌಸೀಫ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ