ಕಾವೇರಿ ಕಿಚ್ಚು: ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಸಿದ್ದು, ಡಿಕೆಶಿ ವಿರುದ್ಧ ಆಕ್ರೋಶ

06/09/2023
ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಇಂದು ಚಾಮರಾಜನಗರದಲ್ಲಿ 7 ನೇ ದಿನ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ಚಾಮರಾಜನಗರ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಹೋರಾಟಗಾರರು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ಇದುವರೆಗೆ ಸಿಎಂ ಸಿದ್ದರಾಮಯ್ಯ ಕಾವೇರಿ ಅನ್ಯಾಯದ ಬಗ್ಗೆ ತುಟಿ ಬಿಚ್ಚುತ್ತಿಲ್ಲ, ಡಿಕೆಶಿ ಹೋರಾಟಗಾರರ ವಿರುದ್ಧವೇ ಮಾತನಾಡುತ್ತಿದ್ದಾರೆ ಎಂದು ಧಿಕ್ಕಾರದ ಘೋಷಣೆ ಕೂಗಿ ಅನ್ನದಾತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.
ಮಹದಾಯಿ ಸೇರಿದಂತೆ ಹಲವು ಬಾರಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ದಕ್ಷಿಣ ಕರ್ನಾಟಕ ಸ್ಪಂದಿಸಿದೆ, ಈಗ ಕಾವೇರಿ ವಿಚಾರದಲ್ಲಿ ಉತ್ತರ ಕರ್ನಾಟಕದ ರೈತರು ದನಿ ಎತ್ತಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.