ಕಾರು ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ: ಐದು ಜನರಿಗೆ ಗಾಯ

28/01/2024
ಮೂಡಿಗೆರೆ: ಕಾರು ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಪ್ರವಾಸಿಗರು ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮುತ್ತಿಗೆಪುರ ಸಮೀಪ ನಡೆದಿದೆ.
ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಎರಡೂ ವಾಹನಗಳಲ್ಲಿದ್ದ ಐದು ಜನರಿಗೆ ಗಾಯಗಳಾಗಿವೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮುತ್ತಿಗೆಪುರ ಸಮೀಪದ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.