ವೈಟ್ ಗ್ರೋ ಅಗ್ರಿ ಎನ್ ಎಲ್ ಪಿ ಅಣಬೆ ತಯಾರಿಕಾ ಘಟಕ ಮುಚ್ಚಲು ಜಿಲ್ಲಾಧಿಕಾರಿ ಆದೇಶ - Mahanayaka

ವೈಟ್ ಗ್ರೋ ಅಗ್ರಿ ಎನ್ ಎಲ್ ಪಿ ಅಣಬೆ ತಯಾರಿಕಾ ಘಟಕ ಮುಚ್ಚಲು ಜಿಲ್ಲಾಧಿಕಾರಿ ಆದೇಶ

mushroom
11/06/2023


Provided by

ಮಂಗಳೂರು ನಗರದ ಹೊರವಲಯದ ವಾಮಂಜೂರಿನ ತಿರುವೈಲ್ ವಾರ್ಡ್ ನಲ್ಲಿ ಕಾರ್ಯಾಚರಿಸುತ್ತಿದ್ದ ವೈಟ್ ಗ್ರೋ ಅಗ್ರಿ ಎನ್ ಎಲ್ ಪಿ ಅಣಬೆ ತಯಾರಿಕಾ ಘಟಕವನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಆದೇಶಿಸಿದ್ದಾರೆ.

ಇಂದು ಗ್ರಾಮಸ್ಥರು ನಡೆಸುತ್ತಿರುವ ಅನಿರ್ದಿಷ್ಟವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ರವಿಕುಮಾರ್ ಈ ಆದೇಶವನ್ನು ಹೊರಡಿಸಿದ್ದಾರೆ. ಈ ಘಟಕದ ಕುರಿತಾಗಿ ಈಗಾಗಲೇ ಮಾಹಿತಿ ವರದಿಗಳನ್ನು ಸಂಗ್ರಹಿಸಲಾಗಿದ್ದು ಇದರ ಹಿನ್ನೆಲೆಯಲ್ಲಿ ಕಾನೂನು ನೀತಿ ನಿಯಮಗಳ ಅಡಿಯಲ್ಲಿ ಜನರು ಮುಚ್ಚುವಂತೆ ಆಗ್ರಹಿಸುತ್ತಿದ್ದ ಹಣಬೆ ತಯಾರಿಕಾ ಘಟಕವನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು‌.

ವಾಮಂಜೂರಿನ ತಿರುವೈಲ್ ವಾರ್ಡ್ ನಲ್ಲಿ ಕಾರ್ಯಾಚರಿಸುತ್ತಿರುವ ವೈಟ್ ಗ್ರೋ ಅಗ್ರಿ ಎನ್ ಎಲ್ ಪಿ ಅಣಬೆ ತಯಾರಿಕಾ ಘಟಕವನ್ನು ಮುಚ್ಚುವಂತೆ ಆಗ್ರಹಿಸಿ ಗ್ರಾಮಸ್ಥರು ಅನಿರ್ದಿಷ್ಠಾವದಿ ಮುಷ್ಕರ ಆರಂಭಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ