4:57 PM Friday 19 - September 2025

ಕಾಮಿಡಿ, ಹಾರರ್ ‘ಶಕಲಕ ಬೂಮ್ ಬೂಮ್’ ತುಳು ಚಿತ್ರ ಬಿಡುಗಡೆ

shakalakabum bum
20/01/2023

ಯುಎನ್ ಸಿನೆಮಾಸ್ ಬ್ಯಾನರ್ ನಡಿ ನಿರ್ಮಾಣಗೊಂಡಿರುವ ‘ಶಕಲಕ ಬೂಮ್ ಬೂಮ್’ ತುಳು ಚಿತ್ರ ತುಳುನಾಡಿನಾದ್ಯಂತ ಬಿಡುಗಡೆಯಾಯಿತು.

ಕಾಮಿಡಿ, ಹಾರರ್ ವಿಭಿನ್ನ ಕಥಾಹಂದರದ ಚಲನಚಿತ್ರವನ್ನು ಶ್ರೀಶ ನಾಯಕ್ ಎಳ್ಳಾರೆ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ನಿತ್ಯಾನಂದ ನಾಯಕ್ ನರಸಿಂಗೆ, ಉಮೇಶ್ ಪ್ರಭು ಮಾಣಿಬೆಟ್ಟು ನಿರ್ಮಾಪಕರಾಗಿದ್ದಾರೆ.

ಡಾಲ್ವಿನ್ ಕೊಳಲಗಿರಿ ಚಿತ್ರದ ಸಂಗೀತ ನಿರ್ದೇಶಕರಾಗಿದ್ದಾರೆ. ತುಳುನಾಡಿನ ಖ್ಯಾತ ಛಾಯಾಗ್ರಾಹಕರಾದ ಪ್ರಜ್ವಲ್ ಸುವರ್ಣ ಹಾಗೂ ಅರುಣ್ ರೈ ಪುತ್ತೂರು ಕ್ಯಾಮರಾ ಕೈಚಳಕವಿದೆ.

ಇನ್ನು ಈ ಚಿತ್ರದ ಪ್ರಮುಖ ಭೂಮಿಕೆಯಲ್ಲಿ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರವೀಣ್ ಮರ್ಕಮೆ, ಮಿಮಿಕ್ರಿ ಶರಣ್, ಕಥಾನಾಯಕನಾಗಿ ಗೊಡ್ವಿನ್ ಸ್ಪಾರ್ಕಲ್ ಹಾಗೂ ಕಥಾನಾಯಕಿಯಾಗಿ ಲಕ್ಷಾ ಶೆಟ್ಟಿ, ರೂಪಶ್ರೀ ವರ್ಕಾಡಿ, ಮನೋಹರ್ ಶೆಟ್ಟಿ ನಂದಳಿಕೆ, ವಸಂತ್ ಮುನಿಯಾಲ್, ಹರೀಶ್ ಗಾಳಿಪಟ, ಸುನಿಲ್ ಕಡ್ತಲ, ಯತೀಶ್ ಪೂಜಾರಿ,
ಯಶವಂತ್, ಪ್ರವೀಣ್ ಆಚಾರ್ಯ, ಕಾಮಿಡಿ ಕಿಲಾಡಿ ಖ್ಯಾತಿಯ ರಾಧೇಶ್, ಕಾಮಿಡಿ ಗ್ಯಾಂಗ್ ಖ್ಯಾತಿಯ ರಾಜೇಶ್ ದಾನಶಾಲೆ, ಲಂಚುಲಾಲ್, ರಾಜೇಶ್ವರಿ ಕುಲಾಲ್, ಧೀರಜ್, ಶಿವಾನಂದ, ಯಜ್ಞೆಶ್ ಶೆಟ್ಟಿ ಅಭಿನಯಿಸಿದ್ದಾರೆ.

ತುಳು ಸಿನೆಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಕಾಮಿಡಿ, ಹಾರರ್, ಥ್ರಿಲ್ಲರ್,
ಸಸ್ಪೆನ್ಸ್ ನ್ನು ಹೊಂದಿರುವ ಹೊಸತನದ ಚಿತ್ರ ಶಕಲಕ ಬೂಮ್ ಬೂಮ್ ಆಗಿದೆ. ಜನರನ್ನು ಮೋಸ ಮಾಡುತ್ತ ಬದುಕುವವರು, ಸಂಪತ್ತಿನ ಆಸೆಯಿಂದ ಬಂದು ಪಾಳು ಬಿದ್ದ ಮನೆಯಲ್ಲಿ ಬಂಧಿಯಾಗುತ್ತಾರೆ. ಆ ಮನೆಯ ರಹಸ್ಯ ಏನು? ಈ ಹಿಂದೆ ಆ ಮನೆಯಲ್ಲಿ ಏನಾಗಿತ್ತು? ನ್ಯಾಯ ಗೆಲ್ಲುತ್ತದಾ? ಸತ್ಯಕ್ಕೆ ಜಯವಿದೆಯಾ? ಎನ್ನುವ ವಿಶಿಷ್ಟವಾದ ಕಥಾಹಂದರ ಹೊಂದಿರುವ ವಿಭಿನ್ನವಾದ ಚಿತ್ರ ಇದಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version