ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ್ದ ದೂರುದಾರೆ ಸಾವು!

yediyurappa
27/05/2024

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ  ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸದಾಶಿವನಗರ ಠಾಣೆಗೆ ದೂರು ನೀಡಲಾಗಿತ್ತು.

ದೂರುದಾರೆಯು ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದರು. ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ, ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.  ಆ ನಂತರ ಈ ಪ್ರಕರಣ ತಣ್ಣಗಾಗಿತ್ತು. ಇದೀಗ ದೂರುದಾರೆ ಸಾವನ್ನಪ್ಪಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version