ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ್ರಂತೆ ಕೇರಳದ ಕಾಂಗ್ರೆಸ್ ನಾಯಕ: ದೂರು ನೀಡಿದ ಬಿಜೆಪಿ ಪಕ್ಷ
ಕೇರಳದ ತಿರುವನಂತಪುರಂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಲೋಡ್ ರವಿ ಅವರು ಗುರುವಾರ ನಡೆದ ಕಾಂಗ್ರೆಸ್ ‘ಸಮರಗ್ನಿ’ ರ್ಯಾಲಿಯ ಮುಕ್ತಾಯದ ಸಂದರ್ಭದಲ್ಲಿ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ದೂರು ನೀಡಿದೆ.
ರವಿ ಅವರು ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆರ್.ಎಸ್.ರಾಜೀವ್ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.
ರವಿ ಅವರು ರಾಷ್ಟ್ರಗೀತೆ ಹಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೇ ವೇಳೆ ಕಾಂಗ್ರೆಸ್ ಶಾಸಕ ಟಿ.ಸಿದ್ದೀಕ್ ತಕ್ಷಣ ಮಧ್ಯಪ್ರವೇಶ ಮಾಡಿ ರಾಷ್ಟ್ರಗೀತೆಯನ್ನು ಸರಿಯಾಗಿ ಹಾಡುವಂತೆ ನೋಡಿಕೊಂಡಿದ್ದಾರೆ.
ಈ ಕುರಿತು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸಿದ್ದೀಕ್, ತಪ್ಪಾದ ಗಾಯನವು ಉದ್ದೇಶಪೂರ್ವಕವಲ್ಲದ ತಪ್ಪು ಎಂದು ಹೇಳಿದ್ದಾರೆ. ಈ ವಿಷಯವನ್ನು ಅಲ್ಲೆ ಬಿಡಿ ಎಂದು ಜನರಲ್ಲಿ ಮನವಿ ಮಾಡಿದ್ದರು.
ಫೇಸ್ಬುಕ್ ಪೋಸ್ಟ್ ನಲ್ಲಿ ಸಿದ್ದೀಕ್ ಅವರು 2021 ರಲ್ಲಿ ಬಂಗಾಳದಲ್ಲಿ ಬಿಜೆಪಿ ಸದಸ್ಯರು ಇದೇ ರೀತಿ ಮಾಡಿರುವ ತಪ್ಪನ್ನು ಎತ್ತಿ ತೋರಿಸಿದ್ದಾರೆ.
2021 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಸ್ಮೃತಿ ಇರಾನಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ.ಸುಧಾಕರನ್ ಮತ್ತು ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ನೇತೃತ್ವದಲ್ಲಿ ನಡೆದ ‘ಸಮರಾಗ್ನಿ’ ರ್ಯಾಲಿ ತಿರುವನಂತಪುರಂನಲ್ಲಿ ಮುಕ್ತಾಯಗೊಂಡಿತ್ತು.
ಈ ಕಾರ್ಯಕ್ರಮದಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕಾಂಗ್ರೆಸ್ ನಾಯಕರಾದ ಸಚಿನ್ ಪೈಲಟ್, ಶಶಿ ತರೂರ್ ಸೇರಿದಂತೆ ಹಲವಾರು ಮಂದಿ ಗಣ್ಯರು ಭಾಗವಹಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

























