ಅಜ್ಜಾವರ: ಮೇನಾಲ ಸ್ಮಶಾನ ಉಳಿಸಲು ಸಮಾಜಕಲ್ಯಾಣ ಇಲಾಖೆಗೆ ದೂರು

14/03/2024
ಸುಳ್ಯ/ ಅಜ್ಜಾವರ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕ ವತಿಯಿಂದ ಅಜ್ಜಾವರ ಮೇನಾಲದಲ್ಲಿರುವ ಸ್ಮಶಾನ ಜಾಗವನ್ನು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗದ ಸಮೂದಾಯದವರಿಗೆ ಉಳಿಸಿಕೊಡಬೇಕೆಂದು ಸುಳ್ಯ ತಾಲೂಕು ಸಮಾಜಕಲ್ಯಾಣ ಇಲಾಖೆಗೆ ದೂರು ನೀಡಲಾಯಿತು.
ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕದ ಅಧ್ಯಕ್ಷರಾದ ಹರೀಶ್ ಮೇನಾಲ ಈ ಬಗ್ಗೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಗೌರವ ಸಲಹೆಗಾರಾದ ಕರುಣಾಕರ ಪಿ ಆರ್. ಪಲ್ಲತ್ತಡ್ಕ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದಕ್ಷಿಣಕನ್ನಡ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತ್ತಡ್ಕ ಜೊತೆಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth