6:52 PM Wednesday 27 - August 2025

ರಸ್ತೆ ಬದಿ ಚರಂಡಿ ಅಗೆಯುತ್ತಿದ್ದ ವೇಳೆ ಕಾಂಪೌಂಡ್‌ ಕುಸಿದು ಓರ್ವ ಸಾವು: ಮತ್ತೋರ್ವನಿಗೆ ಗಾಯ

crime news
30/08/2023

ರಸ್ತೆ ಬದಿಯಲ್ಲಿ ಚರಂಡಿ ಮಾಡುತ್ತಿದ್ದ ವೇಳೆ ಕಾಂಪೌಂಡ್‌ ಕುಸಿದು ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಮಂಗಳೂರು ನಗರದ ಕೃಷ್ಣಾಪುರದ ಕೆಇಬಿ ಬಳಿ ನಡೆದಿದೆ.

ಮೃತರನ್ನು ಹನೀಫ್ ಎಂದು ಗುರುತಿಸಲಾಗಿದ್ದು, ಮಣಿ ಎಂಬುವವರು ಗಾಯಗೊಂಡಿದ್ದಾರೆ. ವ್ಯಕ್ತಿಯೊಬ್ಬರು ರಸ್ತೆ ಬದಿ ಚರಂಡಿ ನಿರ್ಮಾಣದ ಗುತ್ತಿಗೆ ಪಡೆದುಕೊಂಡು ಕೆಲಸ ಮಾಡಿಸುತ್ತಿದ್ದರು ಎಂದು ತಿಳಿದುಬಂದಿದೆ.

ಹನೀಫ್ ಮತ್ತು ಮಣಿ ಅವರು ಚರಂಡಿ ಅಗೆಯುತ್ತಿದ್ದ‌ ವೇಳೆ ಏಕಾಏಕಿ ಪಕ್ಕದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಕೆಲಸಗಾರರ ಮೇಲೆ ಬಿದ್ದಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟರಲ್ಲಾಗಲೇ ಹನೀಫ್ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಮಣಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಹನೀಫ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

Exit mobile version