10:09 PM Wednesday 20 - August 2025

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಕಾಂಕ್ರಿಟ್ ಲಾರಿ: ಕಾರಿನೊಳಗೆ ಸಿಲುಕಿದ ಇಬ್ಬರು ಪ್ರಯಾಣಿಕರು

15/03/2025

ಬೆಳಗಾವಿ: ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಕಾರಿನ ಮೇಲೆ ಕಂಟೈನರ್ ಬಿದ್ದು 6 ಮಂದಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಇದೇ ರೀತಿಯ ಘಟನೆ  ಬೆಂಗಳೂರು—ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆ, ಬೆಳಗಾವಿ ನಗರದ ಹೊರವಲಯ ಕೆಎಲ್ ಇ ಆಸ್ಪತ್ರೆ ಬಳಿ ನಡೆದಿದೆ.

ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಲಾರಿ ಮಗುಚಿ ಬಿದ್ದಿದೆ. ಪರಿಣಾಮವಾಗಿ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗಿದ್ದ ಇಬ್ಬರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ.

ತಮ್ಮನ್ನು ರಕ್ಷಿಸುವಂತೆ ಕಾರಿನೊಳಗಿದ್ದವರು ಕೈ ಬೀಸಿ ಸಹಾಯಕ್ಕಾಗಿ ಸಾರ್ವಜನಿಕರಿಗೆ ಬೇಡಿಕೊಂಡಿದ್ದಾರೆ. ಕೂಡಲೇ ಸಾರ್ವಜನಿಕರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಧಾವಿಸಿ ಇಬ್ಬರನ್ನು ಕಾರಿನಿಂದ ಸುರಕ್ಷಿತವಾಗಿ ಹೊರ ತೆಗೆದು ರಕ್ಷಣೆ ಮಾಡಿದ್ದಾರೆ.

ಕಾರಿನಲ್ಲಿದ್ದವರನ್ನು ಪರಪ್ಪ ಬಾಳೆಕಾಯಿ ಹಾಗೂ ನಿಂಗಪ್ಪ ಕೊಬ್ಬದ ಎಂದು ಗುರುತಿಸಲಾಗಿದೆ.  ಕಾಂಕ್ರಿಟ್ ಲಾರಿ ಮಗುಚಿ ಬಿದ್ದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಕಾರಿನ ಯಾವುದೇ ಭಾಗಗಳು ಉಳಿದಿಲ್ಲ, ಈ ಕಾರಿನಲ್ಲಿ ಸಿಲುಕಿದ್ದವರು ಬದುಕುಳಿದಿರುವುದೇ ಪವಾಡವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ

Exit mobile version