ಜುಲೈ 26: ಮಣಿಪುರ ಕೃತ್ಯ ಖಂಡಿಸಿ ಬೆಂಗಳೂರು ವಿವಿ ಆವರಣದಲ್ಲಿ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ  ಪ್ರತಿಭಟನೆ - Mahanayaka
2:11 PM Tuesday 24 - February 2026

ಜುಲೈ 26: ಮಣಿಪುರ ಕೃತ್ಯ ಖಂಡಿಸಿ ಬೆಂಗಳೂರು ವಿವಿ ಆವರಣದಲ್ಲಿ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ  ಪ್ರತಿಭಟನೆ

bangalore
25/07/2023

ಬೆಂಗಳೂರು: ಮಣಿಪುರದಲ್ಲಿ ನಡೆದ ಹಿಂಸಾಚಾರ, ಕೃತ್ಯಗಳನ್ನು ಖಂಡಿಸಿ ನಾಳೆ (ದಿನಾಂಕ 26.07.2023ರಂದು)  ಬೆಳಗ್ಗೆ 11 ಗಂಟೆಗೆ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ  ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆಂದು ‘ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ’ಯ ಅಧ್ಯಕ್ಷರಾದ ಲಿಂಗರಾಜ್ ಎಸ್.ಎಂ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಎಲ್ಲ ವಿಭಾಗಗಳು ಹಾಗೂ ಎಲ್ಲಾ ನಿಲಯಗಳ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಮಾನವ ಸರಪಳಿ ನಿರ್ಮಿಸಿ ಗ್ರಂಥಾಲಯದಿಂದ ವಿವಿಯ ಆಡಳಿತ ಕಛೇರಿಯವರೆಗೆ ಜಾಥಾ ಮೂಲಕ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ.

ಇದೇ ಸಂದರ್ಭದಲ್ಲಿ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿ ಮತ್ತು ಮಣಿಪುರದಲ್ಲಿ ನಡೆದ ಹಿಂಸಾಚಾರ, ಕೃತ್ಯಗಳನ್ನು ಖಂಡಿಸಬೇಕಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ