ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ಖಂಡಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

ಚಾಮರಾಜನಗರ: ರಾಹುಲ್‌ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬಾಯಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ,ಮರಿಸ್ವಾಮಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಬಾಯಿಗೆ ಕಪ್ಪುಪಟ್ಟಿ ಮೌನಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಶಾಸಕ ಆರ್.ನರೇಂದ್ರ ಮಾತನಾಡಿ, ಎಐಸಿಸಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ರಾಹುಲ್‌ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ೨ ವರ್ಷ ಶಿಕ್ಷೆಯಾಗುವ ರೀತಿಮಾಡಿರುವುದು ಖಂಡನೀಯವಾಗಿದೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರಮೋದಿ ಆಡಳಿತ ದೇಶದಲ್ಲಿ ಬಂದ ಮೇಲೆ ವಿರೋಧ ಪಕ್ಷಗಳನ್ನು ಕಡೆಗಣಿಸುವುದು ಅಲ್ಲದೆ ವಿರೋಧ ಪಕ್ಷದ ಮುಖಂಡರಿಗೆ ತೊಂದರೆ ಕೊಡುವುದು ನಡೆಯುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ರಾಹುಲ್‌ಗಾಂಧಿ ಅವರನ್ನು ಅನರ್ಹಗೊಳಿಸಿರುವ ವಿರುದ್ದ ಮೌನಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಇನ್ನೂ ಎರಡು ತಿಂಗಳು ಆಗಿಲ್ಲ. ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ಅಭಿವೃದ್ದಿ ಬಗ್ಗೆ ಮಾತಾಡಿಲ್ಲ. ಇಲ್ಲದಿರುವ ಕಾರಣ ಹುಡುಕಿ ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ. ಬಿಜೆಪಿಯವರು ಸಾವಿನ ರಾಜಕೀಯವನ್ನು ಬಿಡಬೇಕು ಎಂದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ರಾಹುಲ್‌ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಸರಿಯಲ್ಲ ಬಿಜೆಪಿಯವರು ದ್ವೇಷ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ, ಮಾಜಿ ಶಾಸಕ ಎಸ್. ಜಯಣ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವು, ಆರ್.ಮಹದೇವು,ಜಿಲ್ಲಾ ಮಹಿಳಾ ಅಧ್ಯಕ್ಷೆ ಲತಾರಾಜಶೇಖರಜತ್ತಿ, ಬ್ಲಾಕ್ ಅಧ್ಯಕ್ಷ ಮಹಮ್ಮದ್ ಅಸ್ಗರ್, ಅರಕಲವಾಡಿ ಗುರುಸ್ವಾಮಿ, ತೋಟೇಶ್, ಜಿ.ಪಂ.ಮಾಜಿ ಸದಸ್ಯ ಯೋಗೇಶ್, ಸದಾಶಿವಮೂರ್ತಿ,ನಗರಸಭಾ ಸದಸ್ಯರಾದ ಚಿನ್ನಮ್ಮ, ಕಲಾವತಿ, ಲೀಲಮ್ಮ, ಮಹಿಳಾ ಕಾಂಗ್ರೆಸ್ ನ ಶಕುಂತಲಾ, ಮುಖಂಡ ಮಹೇಶ್ ಕುದೇರು, ಎಸ್ ಸಿ ವಿಭಾಗದ ಅಧ್ಯಕ್ಷ ನಲ್ಲೂರು ಸೋಮೇಶ್, ಎನ್ಎಸ್ ಯುಐ ಅಧ್ಯಕ್ಷ ಮೋಹನ್, ನಗು, ತಾ.ಪಂ. ಮಾಜಿ ಸದಸ್ಯ ಕಾಗಲವಾಡಿ ಶಿವಸ್ವಾಮಿ, ಯುವ ಕಾಂಗ್ರೆಸ್ ಚೇತನ್ ದೊರೆರಾಜು, ನಾಗೇಂದ್ರ, ಯೋಗೇಂದ್ರ ಇತರರು ಭಾಗವಹಿಸಿದ್ದರು.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw