ಸೂರಜ್ ರೇವಣ್ಣಗೆ ಷರತ್ತು ಬದ್ಧ ಜಾಮೀನು ಮಂಜೂರು!
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.
ಸೂರಜ್ ರೇವಣ್ಣಗೆ ವಿಧಿಸಲಾಗಿರುವ ಷರತ್ತುಗಳು:
* ನ್ಯಾಯಾಲಯದಿಂದ ಲಿಖಿತ ಅನುಮತಿಯನ್ನು ಪಡೆದಿರಬೇಕು.
* ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು.
* ಅರ್ಜಿದಾರರು I.O ಮುಂದೆ ಹಾಜರಾಗಬೇಕು. ತಿಂಗಳ ಪ್ರತಿ ಎರಡನೇ ಭಾನುವಾರ ಮತ್ತು ಬೆಳಿಗ್ಗೆ 9.00 ರಿಂದ ಸಂಜೆ 5.00 ರವರೆಗೆ ಅವರ ಹಾಜರಾತಿ ಹಾಕಬೇಕು.
* 6 ತಿಂಗಳ ಅವಧಿಗೆ ಅಥವಾ ಚಾರ್ಜ್ ಶೀಟ್ ಸಲ್ಲಿಸುವವರೆಗೆ ಅರ್ಜಿದಾರರು ಇದೇ ರೀತಿಯ ಅಪರಾಧವನ್ನು ಮಾಡಬಾರದು.
ರೇವಣ್ಣಗೆ ಜಾಮೀನು ಮಂಜೂರಾಗಿದ್ದರೂ ಸದ್ಯಕ್ಕೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವರ ಬಿಡುಗಡೆ ಸಾಧ್ಯತೆ ಇದೆ.
ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 377 ಅಡಿ ದಾಖಲಾಗಿದ್ದ ಎಫ್ ಐಆರ್ ನಲ್ಲಿ ಸೂರಜ್ ರೇವಣ್ಣ ಅವರನ್ನು ಜೂನ್ 23 ರಂದು ಸಿಐಡಿ ಅರೆಸ್ಟ್ ಮಾಡಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97

























