ಸಮೋಸದಲ್ಲಿ ಪತ್ತೆಯಾಯ್ತು ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳು!

ಪುಣೆ: ಸಂಸ್ಥೆಯೊಂದಕ್ಕೆ ಪೂರೈಕೆಯಾದ ಸಮೋಸಗಳಲ್ಲಿ ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳು ಪತ್ತೆಯಾದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಉಪ ಗುತ್ತಿಗೆ ಪಡೆದ ಸಂಸ್ಥೆ ಹಾಗೂ ಇಬ್ಬರು ಕಾರ್ಮಿಕರು ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪುಣೆ ಯ ಪಿಂಪ್ರಿ ಚಿಂಚ್ ವಾಡ್ ನಲ್ಲಿರುವ ಪ್ರಮುಖ ಆಟೋಮೊಬೈಲ್ ಸಂಸ್ಥೆಗೆ ಕ್ಯಾಟಲಿಸ್ಟ್ ಸರ್ವೀಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಆಟೋಮೊಬೈಲ್ ಸಂಸ್ಥೆಯ ಉಪಗುತ್ತಿಗೆ ಪಡೆದ ಮನೋಹರ್ ಎಂಟರ್ ಪ್ರೈಸಸ್ ಎಂಬ ಸಂಸ್ಥೆ ಸಮೋಸ ಪೂರೈಕೆ ಮಾಡಿತ್ತು.
ಈ ಸಮೋಸದಲ್ಲಿ ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳು ಪತ್ತೆಯಾಗಿತ್ತು. ಘಟನೆಯ ಬಗ್ಗೆ ಮನೋಹರ್ ಎಂಟರ್ ಪ್ರೈಸಸ್ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಫಿರೋಜ್ ಶೇಖ್ ಮತ್ತು ವಿಕ್ಕಿ ಶೇಖ್ ಎಂದು ಗುರುತಿಸಲಾದ ಇಬ್ಬರು ಕಾರ್ಮಿಕರು ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳನ್ನು ಸಮೋಸಾಗಳಲ್ಲಿ ಸೇರಿಸಿರುವುದು ಬೆಳಕಿಗೆ ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ರಹೀಮ್ ಶೇಖ್, ಅಜರ್ ಶೇಖ್ ಮತ್ತು ಮಜರ್ ಶೇಖ್ ಎಂದು ಗುರುತಿಸಲಾಗಿದೆ. ಸಂಸ್ಥೆಯ ಹೆಸರು ಕೆಡಿಸಲು ಕಾರ್ಮಿಕರು ಈ ಕೃತ್ಯ ನಡೆಸಿರುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.