ಮಣ್ಣಲ್ಲಿ ಮಣ್ಣಾದ ಸಿ.ಜೆ.ರಾಯ್: ಕಾಸಾಗ್ರ್ಯಾಂಡ್‌ ನಲ್ಲಿ ಅಂತ್ಯಕ್ರಿಯೆ - Mahanayaka
12:10 AM Wednesday 18 - March 2026

ಮಣ್ಣಲ್ಲಿ ಮಣ್ಣಾದ ಸಿ.ಜೆ.ರಾಯ್: ಕಾಸಾಗ್ರ್ಯಾಂಡ್‌ ನಲ್ಲಿ ಅಂತ್ಯಕ್ರಿಯೆ

cj roy
01/02/2026

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಕಾನ್ಫಿಡೆಂಟ್ ಗ್ರೂಪ್‌ ನ ಸಂಸ್ಥಾಪಕ ಅಧ್ಯಕ್ಷರಾದ ಸಿ.ಜೆ.ರಾಯ್ (64) ಅವರ ಅಂತ್ಯಕ್ರಿಯೆಯು ಭಾನುವಾರ ಸಂಜೆ ಬನ್ನೇರುಘಟ್ಟದ ಸಮೀಪವಿರುವ ಕಾಸಾಗ್ರ್ಯಾಂಡ್‌ ನಲ್ಲಿ ಕ್ರಿಶ್ಚಿಯನ್ ಧರ್ಮದ ವಿಧಿ–ವಿಧಾನದಂತೆ ನೆರವೇರಿತು.

ಕಳೆದ ಶುಕ್ರವಾರ ಬೆಂಗಳೂರಿನ ಲ್ಯಾಂಗ್‌ ಫೋರ್ಡ್ ಟೌನ್‌ ನಲ್ಲಿರುವ ತಮ್ಮ ಕಚೇರಿಯಲ್ಲಿ ಆದಾಯ ತೆರಿಗೆ (IT) ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲೇ, ಸಿ.ಜೆ.ರಾಯ್ ಅವರು ತಮ್ಮ ಪರವಾನಗಿ ಹೊಂದಿದ ಪಿಸ್ತೂಲ್‌ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಐಟಿ ದಾಳಿಯಿಂದ ಅವರು ತೀವ್ರವಾಗಿ ಮನನೊಂದಿದ್ದರು ಎಂದು ಹೇಳಲಾಗಿದೆ.

ಅಂತಿಮ ದರ್ಶನ: ಭಾನುವಾರ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರು ಮತ್ತು ಅಭಿಮಾನಿಗಳ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಕುಟುಂಬಸ್ಥರು, ಆಪ್ತರು ಹಾಗೂ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು. ತದನಂತರ ಅವರ ಇಚ್ಛೆಯಂತೆಯೇ ಕಾಸಾಗ್ರ್ಯಾಂಡ್‌ನಲ್ಲಿ ಅಂತ್ಯಸಂಸ್ಕಾರದ ವಿಧಿಗಳನ್ನು ಪೂರೈಸಲಾಯಿತು.

ದೇಶದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ಸಿ.ಜೆ. ರಾಯ್ ಅವರ ಈ ಹಠಾತ್ ಸಾವು ರಿಯಲ್ ಎಸ್ಟೇಟ್ ವಲಯದಲ್ಲಿ ಆಘಾತ ಮೂಡಿಸಿದೆ. ಉದ್ಯಮ ರಂಗದ ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ