‘ಚುನಾವಣಾ ಬಾಂಡ್’ ಮೂಲಕ ಸಂಗ್ರಹಿಸಿದ ಹಣವನ್ನು ಮುಟ್ಟುಗೋಲು ಹಾಕಿ: ಸುಪ್ರೀಂಕೋರ್ಟ್ ಗೆ ಹೀಗೊಂದು ಅರ್ಜಿ ಸಲ್ಲಿಕೆ

06/07/2024

ಚುನಾವಣಾ ಬಾಂಡ್‌ ಮೂಲಕ ರಾಜಕೀಯ ಪಕ್ಷಗಳು ಸಂಗ್ರಹಿಸಿರುವ ಎಲ್ಲಾ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿಯೊಂದು ಸಲ್ಲಿಕೆಯಾಗಿದೆ. ಚುನಾವಣಾ ಬಾಂಡ್‌ ಹೆಸರಿನಲ್ಲಿ ರಾಜಕೀಯ ಪಕ್ಷಗಳು ಪಡೆದಿರುವ ಸುಮಾರು 16,518 ಕೋಟಿ ರೂಪಾಯಿ ದೇಣಿಗೆಯಲ್ಲ, ಬದಲಾಗಿ ಅದು ಕಾರ್ಪೋರೇಟ್‌ ಸಂಸ್ಥೆಗಳು ಲಾಭ ಪಡೆಯಲು ನೀಡಿರುವ ಹಣ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಚುನಾವಣಾ ಬಾಂಡ್ ಮೂಲಕ ತಾವು ಪಡೆದ ಹಣಕ್ಕಾಗಿ ರಾಜಕೀಯ ಪಕ್ಷಗಳು ಕಾರ್ಪೋರೇಟ್ ದಾನಿಗಳಿಗೆ ಮಾಡಿಕೊಟ್ಟ ಕಾನೂನುಬಾಹಿರ ಅನುಕೂಲಗಳ ಕುರಿತಂತೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸುವಂತೆಯೂ ಅರ್ಜಿದಾರರು ಕೋರಿದ್ದಾರೆ.

ಒಟ್ಟು 23 ರಾಜಕೀಯ ಪಕ್ಷಗಳು ಸುಮಾರು 1,210 ಕ್ಕೂ ಹೆಚ್ಚು ದಾನಿಗಳಿಂದ ಚುನಾವಣಾ ಬಾಂಡ್‌ ಮೂಲಕ ಅಂದಾಜು 12,516 ಕೋಟಿ ರೂಪಾಯಿ ಪಡೆದಿವೆ.. ಸುಮಾರು 21 ದಾನಿಗಳು ತಲಾ 100 ಕೋಟಿ ರೂ.ಗೂ ಅಧಿಕ ಮೊತ್ತವನ್ನು ನೀಡಿದ್ದಾರೆ. ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಎಡಿಆರ್‌ ಈ ವಿವರಗಳನ್ನು ತೆರದಿಟ್ಟಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಎಲ್ಲಾ ಫಲಾನುಭವಿ ರಾಜಕೀಯ ಪಕ್ಷಗಳ ಆದಾಯ ಮರು ಪರಿಶೀಲಿಸಬೇಕು
ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಮೊತ್ತಕ್ಕೆ ತೆರಿಗೆ ವಿನಾಯಿತಿ ನೀಡಬಾರದು ಎಂದು ಕೂಡ ಅರ್ಜಿಯಲ್ಲಿ ಆಗ್ರಹಿಸಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version