ಫಲಿತಾಂಶಕ್ಕೆ ಮೊದಲೇ ಕಾಂಗ್ರೆಸ್ ಅಭ್ಯರ್ಥಿ ಕೊರೊನಾಕ್ಕೆ ಬಲಿ! - Mahanayaka
12:59 AM Tuesday 14 - October 2025

ಫಲಿತಾಂಶಕ್ಕೆ ಮೊದಲೇ ಕಾಂಗ್ರೆಸ್ ಅಭ್ಯರ್ಥಿ ಕೊರೊನಾಕ್ಕೆ ಬಲಿ!

leela govinda
30/04/2021

ರಾಮನಗರ: ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಕೊವಿಡ್ ಸೋಂಕಿಗೆ ಬಲಿಯಾಗಿರುವ ಘಟನೆ ನಡೆದಿದ್ದು, ವಾರದ ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರಿಗೆ ಕೊರೊನಾ ತಗಲಿತ್ತು.


Provided by

ರಾಮನಗರ ನಗರ ಸಭೆಯ ನಾಲ್ಕನೇ ವಾರ್ಡ್ ನಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ  42 ವರ್ಷ ವಯಸ್ಸಿನ ಲೀಲಾ ಗೋವಿಂದರಾಜು ಮೃತಪಟ್ಟವರಾಗಿದ್ದು,  ವಾರದ ಹಿಂದೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವೇಳೆ ಅವರಿಗೆ ಕೊರೊನಾ ಸೋಂಕು ತಗಲಿತ್ತು.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಇದೇ ತಿಂಗಳ 27ರಂದು ರಾಮನಗರ ನಗರ ಸಭೆ ಚುನಾವಣೆ ನಡೆದಿತ್ತು. ಈ ಚುನಾವಣೆಯ ಫಲಿತಾಂಶ ಇಂದು ಬರಲಿದೆ. ಆದರೆ ಅಷ್ಟರಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿಧನರಾಗಿದ್ದಾರೆ.

 

ಇತ್ತೀಚಿನ ಸುದ್ದಿ