10:10 PM Wednesday 22 - October 2025

ಎನ್‌ಎಸ್‌ಯುಐ ನ ಎಐಸಿಸಿ ಉಸ್ತುವಾರಿಯಾಗಿ ಕನ್ನಯ್ಯ ಕುಮಾರ್

07/07/2023

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ಎಐಸಿಸಿ ಉಸ್ತುವಾರಿಯನ್ನಾಗಿ ಕನ್ನಯ್ಯ ಕುಮಾರ್ ಅವರನ್ನು ಕಾಂಗ್ರೆಸ್ ನೇಮಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕನ್ನಯ್ಯ ಕುಮಾರ್ ಅವರನ್ನು ಎನ್‌ಎಸ್‌ಯುಐದ ಎಐಸಿಸಿ ಉಸ್ತುವಾರಿಯನ್ನಾಗಿ ತಕ್ಷಣದಿಂದಲೇ ಅನ್ವಯವಾಗುವಂತೆ ನೇಮಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀರಜ್ ಕುಂದನ್ ಅವರು ಎನ್‌ಎಸ್‌ಯುಐನ ಅಧ್ಯಕ್ಷರಾಗಿದ್ದಾರೆ.
ಇತ್ತೀಚೆಗೆ ನಡೆದ ‘ಭಾರತ್‌ ಜೋಡೊ ಯಾತ್ರೆ’ಯಲ್ಲಿ ಭಾಗವಹಿಸಿದ್ದ ಕನ್ಹಯ್ಯಾ ಕುಮಾರ್‌, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹೆಜ್ಜೆ ಹಾಕಿದ್ದರು.

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version