ಮಾ.9ರಂದು ಸರಕಾರದ ಭ್ರಷ್ಟಾಚಾರ ವಿರೋಧಿಸಿ ಬಂದ್ ಆಚರಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಕರೆ

congress
07/03/2023

ಉಡುಪಿ: ರಾಜ್ಯ ಬಿಜೆಪಿ ಸರಕಾರದ ಭ್ರಷ್ಟಾಚಾರ ಹಾಗೂ 40 % ಕಮಿಷನ್ ವಿರುದ್ಧ ಮಾರ್ಚ್ 9 ರಂದು ಬೆಳಿಗ್ಗೆ ಗಂಟೆ 9 ರಿಂದ 11 ಗಂಟೆಯ ವರೆಗೆ ಎರಡು ಗಂಟೆಗಳ ಸಾಂಕೇತಿಕ ಬಂದ್ ಗೆ ಕಾಂಗ್ರೆಸ್ ಪಕ್ಷ ಕರೆ ನೀಡಿದೆˌ

ಈ ನಿಟ್ಟಿನಲ್ಲಿ ವ್ಯಾಪಾರಸ್ಥರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡುವ ಮೂಲಕ ಭ್ರಷ್ಟಾಚಾರದ ವಿರುದ್ಧದ ನಮ್ಮ ಧ್ವನಿಗೆ ಬೆಂಬಲವಾಗಿ ನಿಲ್ಲ ಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರ್ ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಂಡಿದ್ದಾರೆˌ

ಸರಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಮುಖ್ಯಮಂತ್ರಿಗಳು ಪ್ರತಿ ಬಾರಿಯೂ ಹಿಂದೆಯೂ ಭ್ರಷ್ಟಾಚಾರ ನಡೆದಿದೆ ಎಂದು ಹೇಳುವ ಮೂಲಕ ತಮ್ಮನ್ನು ತಾವು ಸಮರ್ಥನೆ ಮಾಡಿಕೊಳ್ಳುತ್ತಿದ್ದರು ˌಗುತ್ತಿಗೆದಾರರಿಂದ ಕಮಿಷನ್ ಪಡೆಯುವ ಬಗ್ಗೆ ಮುಖ್ಯಮಂತ್ರಿಗಳು ಸದಾ ದಾಖಲೆ ಕೊಡಿ ಎಂದು ಕೇಳುತ್ತಿದ್ದರು ಆದರೆ ಈಗ ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಮಗ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಎಂಟು ಕೋಟಿಗೂ ಅಧಿಕ ಮೊತ್ತ ವಶಪಡಿಸಿಕೊಂಡಿರುವುದು ಬಿಜೆಪಿ ಸರಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ ಮುಖ್ಯಮಂತ್ರಿಗಳು ತಕ್ಷಣವೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಶೋಕ್ ಕುಮಾರ್ ಕೊಡವೂರು ಆಗ್ರಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version